ಸುಬ್ರಮಣ್ಯ: ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ

ಶೇರ್ ಮಾಡಿ

ನೇಸರ ಜು.03: ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೆಂಜರ್ಸ್ ಘಟಕ ವತಿಯಿಂದ ಜು.02 ರಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಕಡಬ ಘಟಕ, ಯುವ ರೆಡ್ ಕ್ರಾಸ್, ಮಂಗಳೂರು ವಿಶ್ವವಿದ್ಯಾನಿಲಯ, ಲಯನ್ಸ್ ಕ್ಲಬ್ ಕಡಬ, ಜೆಸಿಐ ಪಂಜ ಪಂಚಶ್ರೀ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇವುಗಳ ಜಂಟಿ ಆಶ್ರಯದಲ್ಲಿ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಗಾರ ಇದರ ಸಮಾರೋಪ ಸಮಾರಂಭವು ನೆರವೇರಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯದ ಠಾಣಾಧಿಕಾರಿ ಜಂಬೂರಾಜ್ ಮಹಾಜನ್ ಉಪಸ್ಥಿತರಿದ್ದು ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿರುವ ಈ ಅವಧಿಯಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ತುಂಬಾ ಪ್ರಸ್ತುತವಾಗಿದೆ ಎಂದು ಕಾರ್ಯಕ್ರಮವನ್ನು ಶ್ಲಾಘಿಸಿದರು. ಅಧ್ಯಕ್ಷ ಸ್ಥಾನವನ್ನು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಜಿಲ್ಲಾಧ್ಯಕ್ಷರಾದ LN ಗೋಪಾಲಕೃಷ್ಣ ಎ ಎಸ್., ವಹಿಸಿದ್ದರು. ವೇದಿಕೆಯಲ್ಲಿ Rtn . ಗೋಪಾಲ್ ಎಣ್ಣೆ ಮಜಲು ಅಧ್ಯಕ್ಷರು ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕಾರ್ಯದರ್ಶಿ ಸಮಾಜ ಸೇವಕ ರವಿ ಕಕ್ಕೆಪದವು, ಡಾ.ಗಣಪತಿ ಗೌಡ ನೋಡಲ್ ಅಧಿಕಾರಿ ಯುವ ರೆಡ್ ಕ್ರಾಸ್ ಮಂಗಳೂರು ಉಪಸ್ಥಿತರಿದ್ದು, ಈ ತರಬೇತಿ ಕಾರ್ಯಗಾರವು ವಿದ್ಯಾರ್ಥಿಗಳ ಜೀವನಕ್ಕೆ ನೇರವಾಗಿ ಸಂಬಂಧಪಟ್ಟಿದ್ದು, ಅವಘಡಗಳು ಉಂಟಾದಾಗ ವಿದ್ಯಾರ್ಥಿಯು ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ಹೇಗೆ ರಕ್ಷಿಸಿಕೊಳ್ಳಬಹುದು ಎಂಬ ಅರಿವು ವಿದ್ಯಾರ್ಥಿಗಳಲ್ಲಿ ಮೂಡಿದೆ ಎಂದು ಕಾರ್ಯಕ್ರಮದ ಕುರಿತು ಮೆಚ್ಚುಗೆಯ ಮಾತುಗಳನ್ನು ನುಡಿದರು. ಮಹಾವಿದ್ಯಾಲಯದ ಯೂತ್ ರೆಡ್ ಕ್ರಾಸ್ ಸಂಯೋಜಕಿ ಶ್ರೀಮತಿ ಕೃತಿಕಾ ಸ್ವಾಗತಿಸಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ ಟಿ., ವೇದಿಕೆಯಲ್ಲಿ ಉಪಸ್ಥಿತರಿದ್ದು ಅತಿಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು.
ವಿದ್ಯಾರ್ಥಿಗಳಾದ ವಿಘ್ನೇಶ್, ದೀಕ್ಷಾ, ಅನನ್ಯ ತರಬೇತಿಯ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಮಹಾವಿದ್ಯಾಲಯದ ರೇಂಜರ್ಸ್ ಸಂಯೋಜಕಿ ಶ್ರೀಮತಿ ಪ್ರಮೀಳಾ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ಆರತಿ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಇವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪರಿಷತ್ತಿನ ಕೃಷ್ಣಪ್ಪ ಪಂಬೀಲ, ಪುತ್ತೂರು ತಾಲೂಕು ಅಧ್ಯಕ್ಷರು ಕಡಬ ತಾಲೂಕು ಘಟಕದ ಕಾರ್ಯದರ್ಶಿ ವಿನೇಶ್ ಬಿಳಿನೆಲೆ, ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶ್ರೀಮತಿ ವನಿತಾ, ರೋವರ್ಸ್ ರೆಂಜರ್ಸ್ ಘಟಕದ ಸಂಯೋಜಕರಾದ ಶ್ರೀಮತಿ ಅಶ್ವಿನಿ ಕಾರ್ಯಕ್ರಮಕ್ಕೆ ಸಹಕರಿಸಿದರು. ಅಶ್ವಿನ್ ಕುಮಾರ್ ಎಂ., ಸದಸ್ಯರು ರಾಜ್ಯ ವಿಪತ್ತು ನಿರ್ವಹಣಾ ತಂಡ ಮಂಗಳೂರು ಇವರು ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆಯ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಂಡರು. ಸುಮಾರು 75 ವಿದ್ಯಾರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡರು.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

error: Content is protected !!