ಇಂದು ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ : ರಿಸಲ್ಟ್ ನೋಡಲು ಲಿಂಕ್‌ ಇಲ್ಲಿದೆ

ಶೇರ್ ಮಾಡಿ

ನೇಸರ ಜು.21: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದ್ರೆ, ವೆಬ್‌ಸೈಟ್‌ನಲ್ಲಿ ನಾಳೆ (ಜುಲೈ 21) ಫಲಿತಾಂಶ ಲಭ್ಯವಾಗಲಿದೆ. 2022ರ ಜೂನ್ 27ರಿಂದ ಜುಲೈ 4ರ ವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆಸಲಾಗಿತ್ತು. ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆ ನಂತರ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://karresults.nic.in/ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಚೆಕ್‌ ಮಾಡುವುದು ಹೇಗೆ?
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ http://kseeb.kar.nic.in/ ಗೆ ಅಥವಾ karresults.nic.in ಗೆ ಭೇಟಿ ನೀಡಿ.
ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್‌ ಮಾಡಿ.
ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
ಫಲಿತಾಂಶ ಪೇಜ್‌ ಓಪನ್‌ ಆಗುತ್ತದೆ.
ಡೌನ್‌ಲೋಡ್‌ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಿ.

Leave a Reply

error: Content is protected !!