ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅಮರ ಸುಳ್ಯ ಸ್ವಾತಂತ್ರ ಸಮರ 1837ರ ವಿಶೇಷ ಉಪನ್ಯಾಸ ಕಾರ್ಯಕ್ರಮ

ಶೇರ್ ಮಾಡಿ

ನೇಸರ ಜು.21: ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿಇತಿಹಾಸ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಸಹಯೋಗದದಲ್ಲಿ ಆಜಾದಿ ಕ ಅಮೃತ ಮಹೋತ್ಸವದ ಅಂಗವಾಗಿ ಅಮರ ಸುಳ್ಯ ಸ್ವಾತಂತ್ರ ಸಮರ 1837ರ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಶ್ರೀ ಗೋಪಾಲ ಪೆರಾಜೆ ಇವರು ಅಮರ ಸುಳ್ಯ ದಂಗೆಯ ಬಗ್ಗೆ ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಮತ್ತು ಎಸ್ ಎಸ್ ಪಿ ಯು ಕಾಲೇಜಿನ ಇತಿಹಾಸ ಉಪನ್ಯಾಸಕರಾದ ರತ್ನಾಕರ್ ಎಸ್. ಇವರು ಉಪಸ್ಥಿತರಿದ್ದರು.
ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ. ಅಧ್ಯಕ್ಷತೆಯನ್ನು ವಹಿಸಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸಾದ ಎನ್. ಸ್ವಾಗತಿಸಿದರು. ಉಪನ್ಯಾಸಕಿ, ಶ್ರೀಮತಿ ನಮಿತಾ ಎಂ. ಎ . ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿ ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!