ಧರ್ಮಸ್ಥಳ ಲಕ್ಷದೀಪೋತ್ಸವ – 9ನೇ ವರ್ಷದ ಪಾದಯಾತ್ರೆ ಸಮಾಲೋಚನಾ ಸಭೆ

ಶೇರ್ ಮಾಡಿ

ನೇಸರ ನ20: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದ ಅಂಗವಾಗಿ 9ನೇ ವರ್ಷದ ಪಾದಯಾತ್ರೆ ಸಮಾಲೋಚನೆ ಸಭೆ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ನ.20 ರಂದು ನಡೆಯಿತು.
ಉಜಿರೆ ಜನಾರ್ಧನ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಾಯರವರು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಕೆ. ಹರೀಶ್ ಕುಮಾರ್, ಕೆ. ಪ್ರತಾಪ್ ಸಿಂಹ ನಾಯಕ್, ಗ್ರಾಮಾಭಿವೃದ್ಡಿ ಯೋಜನೆಯ ಮುಖ್ಯಕಾರ್ಯನಿರ್ವಾಹಕ ಡಾ. ಎಲ್. ಎಚ್. ಮಂಜುನಾಥ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಜಿರೆ ಲಕ್ಷ್ಮಿ ಗ್ರೂಪ್ಸ್ ನ ಮೋಹನ್ ಕುಮಾರ್, ಸಂಧ್ಯಾ ಟ್ರೇಡರ್ಸ್ ನ ರಾಜೇಶ್ ಪೈ, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಜಯಕರ ಶೆಟ್ಟಿ, ಯಶವಂತ್ ಎಸ್. ಗ್ರಾಮಾಭಿವೃದ್ಧಿ, ಯೋಜನೆಯ ಕಾರ್ಯಕರ್ತರು, ಜನ ಜಾಗೃತಿ ವೇದಿಕೆಯ ಪದಾಧಿಕಾರಿಗಳು, ಭಕ್ತಾಧಿಗಳು ಭಾಗವಹಿಸಿದ್ದರು.
ನ.29 ರಂದು ಸಂಜೆ 3.00 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆಯ ಮೂಲಕ ತೆರಳಿ ಅಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನವನ್ನು ಪಡೆದು ಬಳಿಕ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರ ಆಶೀರ್ವಾದವನ್ನು ಪಡೆಯಲಾಗುವುದು. ಎಲ್ಲಾ ಬಾಂಧವರು ಜಾತಿ, ಮತ, ಪಂಥವನ್ನು ಬಿಟ್ಟು ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಸಭೆಯಲ್ಲಿ ವಿನಂತಿಸಲಾಯಿತು.

Leave a Reply

error: Content is protected !!