ನೇಸರ ಜು.29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ಘೋಷಿಸಿದೆ.
ಅಗ್ನಿಶಾಮಕ, ಆಸ್ಪತ್ರೆಗಳು, ಮೆಡಿಕಲ್ ಶಾಪ್ಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು ತೆರೆದಿರಲು ಅವಕಾಶ ನೀಡಲಾಗಿದೆ.
ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸಾಮಾನ್ಯವಾಗಿ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರ ಆದೇಶದಲ್ಲಿ ತಿಳಿಸಲಾಗಿದೆ.