ನೇಸರ ಆ.09: ನೆಲ್ಯಾಡಿ ವಿಶ್ವಕವಿ ರವೀಂದ್ರನಾಥ ಠಾಗೋರರ ಪುಣ್ಯತಿಥಿ ಕಾರ್ಯಕ್ರಮವು ಆ.8ರಂದು ಸಂತ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಜಿ.ಕೆ ತೋಮಸ್, ಪ್ರಾಂಶುಪಾಲರು ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆ ನೆಲ್ಯಾಡಿ ಇವರು ಮಾತನಾಡಿ, “ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ವೇದಿಕೆಯನ್ನು ಒದಗಿಸುತ್ತವೆ. ಇಂತಹ ಸಾಹಿತ್ಯಕ ಕಾರ್ಯಕ್ರಮಗಳನ್ನು ವಿದ್ಯಾಸಂಸ್ಥೆಗಳಲ್ಲಿ ನಡೆಸುವುದರಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಯಲು ಪ್ರೇರಣೆ ನೀಡುತ್ತದೆ” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಸಂಸ್ಥೆಯ ಸಂಚಾಲಕರಾದ ಅಬ್ರಹಾಂ ವರ್ಗೀಸ್ ಮಾತನಾಡಿ” ವಿದ್ಯಾಸಂಸ್ಥೆಗಳಲ್ಲಿ ನಡೆಸುವ ಕಾರ್ಯಕ್ರಮದ ಔಚಿತ್ಯವನ್ನು ಅರಿತು, ವಿದ್ಯಾರ್ಥಿಗಳು ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಜೀವನದಲ್ಲಿ ಅದರ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಭವಿಷ್ಯದಲ್ಲಿ ಯಶಸ್ಸು ಲಭಿಸುತ್ತದೆ” ಎಂದರು.
ವಿದ್ಯಾರ್ಥಿಗಳು ರವೀಂದ್ರನಾಥ ಠಾಗೋರರು ಬರೆದ ಕಥೆ, ಹಾಡು, ಹಾಗೂ ರವೀಂದ್ರರ ಕುರಿತಾದ ಭಾಷಣಗಳನ್ನು ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಆರ್.ವೆಂಕಟ್ರಮಣ, ರವೀಂದ್ರ.ಟಿ, ವಿ.ಆರ್.ಹೆಗ್ಡೆ ಉಪಸ್ಥಿತರಿದ್ದರು.
ಅನುಶ್ರೀ ಮತ್ತು ಬಳಗದವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ , ಕಾಲೇಜಿನ ಪ್ರಾಚಾರ್ಯರಾದ ಏಲಿಯಾಸ್ ಎಂ. ಕೆ ರವರು ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅಶ್ವಿನ್ ಕೆ.ಎಸ್ ಹಾಗೂ ಆಯಿಶತು ಮಿಸ್ರಿಯಾ ಕಾರ್ಯಕ್ರಮ ನಿರೂಪಿಸಿ, ಆಂಗ್ಲಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದ ಹರಿಪ್ರಸಾದ್ ಕೆ ವಂದಿಸಿದರು.
ಕಾಲೇಜು ವಿಭಾಗದ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ, ಕನ್ನಡ ಮಾಧ್ಯಮದ ಶಿಕ್ಷಕ ವರ್ಗೀಸ್ ಫ್ರಾನ್ಸಿಸ್, ಹಾಗೂ ಆಂಗ್ಲ ಮಾಧ್ಯಮದ ಶಿಕ್ಷಕಿ ರಾಬಿಯಾರವರು ಕಾರ್ಯಕ್ರಮ ಸಂಯೋಜಿಸಿ, ಶಿಕ್ಷಕರಾದ ಕರುಣಾಕರ ನಿರ್ವಹಿಸಿದರು. ಕನ್ನಡ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ತೋಮಸ್ ಎಂ.ಐ ಹಾಗೂ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಸಹಕರಿಸಿದರು.