ಬೆಂಗಳೂರು: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ (80) ಮಂಗಳವಾರ(ನ.8 ರಂದು) ನಿಧನರಾಗಿದ್ದಾರೆ.
ಅ.10 ರಂದು ಟಿ.ಎಸ್. ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳವಾರ ನಿಧನರಾಗಿದ್ದಾರೆ.
ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ಅಭಿಮನ್ಯು, AK 47, ಅವತಾರ ಪುರುಷ, ಚಿನ್ನ, ಹೊಸ ನೀರು, ಗಜೇಂದ್ರ, ವಿಶ್ವ, ಪ್ರತಾಪ್, ಪೊಲೀಸ್ ಲಾಕಪ್, ರೆಡಿಮೇಡ್ ಗಂಡ, ಸ್ನೇಹಲೋಕ, ಸುಂದರಕಾಂಡ, ಸಿಂಹದ ಮರಿ, ಮೂರು ಜನ್ಮ, ಸಾಂಗ್ಲಿಯಾನ, ಟೈಮ್ ಬಾಂಬ್, ಲಾಕಪ್ ಡೆತ್, ಸಂಭವಾಮಿ ಯುಗೇ ಯುಗೇ, ರಣಚಂಡಿ, ಸಮಯದ ಗೊಂಬೆ, ಸಂಗ್ರಾಮ, ನ್ಯೂ ಡೆಲ್ಲಿ, ಸಾರಥಿ ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ವಿಶಿಷ್ಠ ಕಂಠಸಿರಿಯನ್ನು ಲೋಹಿತಾಶ್ವ ಹೊಂದಿದ್ದಾರೆ.