ಪುತ್ತೂರು: ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 13, 14ರಂದು ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಣ ರಾಜ್ಯ ವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಕೃಪಾಲ್.ಪಿ.ಕೆ (ಕೆಮ್ಮಾಯಿ ಪ್ರಕಾಶ್.ಬಿ, ಸುನೀತಾ ಸಿ.ಎಚ್ ದಂಪತಿ ಪುತ್ರ) 600 ಮೀಟರ್-ದ್ವಿತೀಯ ಸ್ಥಾನ ಪಡೆದುಕೊಂಡಿದ್ದು,
ನವೆಂಬರ್ 19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾನೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.