ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ 2022-23 ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ಶೇರ್ ಮಾಡಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ 2022-23 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಪುತ್ತೂರಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ ಶ್ರೀಧರ್ ಗೌಡ ಅವರು ಉದ್ಘಾಟಿನೆಯನ್ನು ನೆರವೇರಿಸಿ ವಿದ್ಯಾರ್ಥಿ ಜೀವನದ ಮೌಲ್ಯಗಳು ಮತ್ತು ಜವಾಬ್ದಾರಿಯ ಕುರಿತು ಮಾತನಾಡಿದರು.

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಮತ್ತು ಕಾಲೇಜಿನ ಕಾರ್ಯದರ್ಶಿಗಳಾದ ಡಾ.ನಿಂಗಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿ ಸಂಘಕ್ಕೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ದಿನೇಶ ಪಿ. ಟಿ. ವಿದ್ಯಾರ್ಥಿ ಸಂಘಕ್ಕೆ ಶುಭಹಾರೈಸಿದರು.
ವಿದ್ಯಾರ್ಥಿ ಸಂಘದ ವತಿಯಿಂದ ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಮಹಾಲಿಂಗ ನಾಯ್ಕ ಅಮೈ ಅವರಿಗೆ ಸನ್ಮಾನ ಮಾಡಲಾಯಿತು. ವಿದ್ಯಾರ್ಥಿ ಸಂಘದ ಸಲಹಾಗಾರರಾದ ಶ್ರೀಮತಿ ಶ್ರೀಲತಾ ಕಮಿಲ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರಾದ ಡಾ.ಗೋವಿಂದ ಎನ್ ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಕ್ಷತ್ ಸ್ವಾಗತಿಸಿ, ಉಪಾಧ್ಯಕ್ಷೆ ಜಯಶ್ರೀ ಎಂ ಸಿ ವಂದಿಸಿದರು. ವಿದ್ಯಾರ್ಥಿಗಳಾದ ಸಂತೋಷ್ ಬಿ.ಕೆ ಮತ್ತು ವಿದ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಸಲಹೆಗಾರರಾದ ಡಾ. ನೀತು ಸೂರಜ್ ಮತ್ತು ಕುಮಾರ್ ಶೇಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!