ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಸ್ಕೃತ ಶಿಕ್ಷಕ ವೆಂಕಟೇಶ್ ಪ್ರಸಾದ್ ರಾಜ್ಯಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಹಿರಿಯರ ಕ್ರೀಡಾ ಸಂಘದ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ 17ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪುತ್ತೂರು, ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ ವೆಂಕಟೇಶ್ ಪ್ರಸಾದ್ ಇವರು 45ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ದ್ವಿತೀಯ ಹಾಗೂ ಜಾವೆಲಿನ್ ಎಸೆತದಲ್ಲಿ ತೃತೀಯ ಸ್ಥಾನ ಪಡೆದು ಕೋಲಾರದಲ್ಲಿ ನಡೆಯುವ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದ ನಿವಾಸಿಯಾಗಿರುತ್ತಾರೆ.

Leave a Reply

error: Content is protected !!