
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಜಂಟಿ ಆಶ್ರಯದಲ್ಲಿ ದಶಂಬರ್ 13ರಂದು ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ ಪ್ರೌಢ ವಿಭಾಗದ ಭಾವಗೀತೆಯಲ್ಲಿ ತೃತೀಯ ಬಹುಮಾನ ಗಳಿಸಿರುತ್ತಾರೆ. ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ 7ನೇ ತರಗತಿಯ ಕುಮಾರಿ ನಿಲಿಷ್ಕಾ ದ್ವಿತೀಯ ಬಹುಮಾನ ಹಾಗೂ ಲಘು ಸಂಗೀತದಲ್ಲಿ 7ನೇ ತರಗತಿಯ ಕುಮಾರಿ ಸುಪ್ರಜಾ ರಾವ್ ತೃತೀಯ ಬಹುಮಾನ ಗಳಿಸಿರುತ್ತಾರೆ.




