ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಪ್ರಾಕ್ತನ ವಿದ್ಯಾರ್ಥಿ ಸಂಘ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಇವುಗಳ ಜಂಟಿ ಆಶ್ರಯದಲ್ಲಿ ದಿನಾಂಕ 19.12.2022 ರಂದು ವ್ಯಸನ ಮುಕ್ತ ಸಮಾಜದ ಕುರಿತು ಜಾಥಾವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ತ್ರಿಮೂರ್ತಿ ವಿ.ಕೆ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳಾದ ಶ್ರೀಮತಿ ಭಾಗ್ಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಬಸವರಾಜ್ ಚಕ್ರಂದ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳಾದ ಶ್ರೀಮತಿ ಹೇಮಲತಾ, ತಾರಾ, ಕವಿತಾ, ಆರೋಗ್ಯ ನಿರೀಕ್ಷಣಾಧಿಕಾರಿ ಉಮರ್ ಖಾನ್, ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.
ಪ್ರಾಕ್ತನ ವಿದ್ಯಾರ್ಥಿ ಸಂಘದ ಸದಸ್ಯೆ ಶ್ರೀಮತಿ ವಿಮಲಾ ರಂಗಯ್ಯ ಮಾದಕ ವ್ಯಸನದ ಪಿಡುಗಿನ ಕುರಿತು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಇನ್ನೋರ್ವ ಸದಸ್ಯೆ ಶ್ರೀಮತಿ ಭಾರತಿ ದಿನೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಶ್ರೀಮತಿ ಆರತಿ ಕೆ, ಶ್ರೀಮತಿ ನಮಿತಾ ಎಂಎ ನಾಯಕರುಗಳು ಹಾಗೂ ಸ್ವಯಂಸೇವಕರು ಜಾತಾದಲ್ಲಿ ಭಾಗವಹಿಸಿದರು.