








ರಾಜ್ಯದ ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಗೆ ಮೇಲ್ದರ್ಜೆಗೇರಿಸಬೇಕು ಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಇಡೇರಿಸುವ ಕುರಿತು ಡಿ. 19 ರಂದು ಬೆಳಗಾವಿಯಲ್ಲಿ ರಾಜ್ಯ ಮಟ್ಟದ ಬೃಹತ್ ಹೋರಾಟ ನಡೆಯಿತು. ಗ್ರಾ. ಪಂ ಕಾರ್ಯನಿರ್ವಹಿಸುತ್ತಿರುವ ಬಿಲ್ಲ್ ಕಲೇಕ್ಟರ್, ಕ್ಲರ್ಕ್ ಕಮ್ ಡಿಇಓ, ಡಾಟ ಎಂಟ್ರೀ ಅಪರೇಟರ್, ವಾಟರ್ ಮ್ಯಾನ್, ಪಂಪುಚಾಲಕ, ಶುಚಿತ್ವ ನೌಕರರು ಹಾಗೂ ಅಟೆಂಡರ್ಗಳು ಭವಿಷ್ಯ ನಿಧಿ, ಆರೋಗ್ಯ ಭದ್ರತೆ, ಸರಿಯಾದ ವೇತನ ಶ್ರೇಣಿ, ಉದ್ಯೋಗ ಭದ್ರತೆ ಹಾಗೂ ನಿವೃತ್ತಿ ಜೀವನಕ್ಕೆ ಭದ್ರತೆ ಇಲ್ಲದೇ ಕಳೆದ ಮೂರು ದಶಕಗಳಿಂದ ಕೇವಲ ಕನಿಷ್ಠ ಕೂಲಿ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದು, ಸರಕಾರದಿಂದ ಉದ್ಯೋಗ ಭದ್ರತೆ ಹಾಗೂ ವಿವಿಧ ಸೌಲಭ್ಯಗಳಿಗಾಗಿ 12000 ಕ್ಕೂ ಅಧಿಕ ಗ್ರಾಮ ಪಂಚಾಯತ್ ನೌಕರರು ಪ್ರತಿಭಟನೆ ನಡೆಸಿದ್ದಾರೆ.

ಸಚಿವರ ಆಶ್ವಾಸನೆ ತಾತ್ಕಾಲಿಕವಾಗಿ ಹೋರಾಟದ ರದ್ದು
ಗ್ರಾ. ಪಂ. ನೌಕರರ ಅಹವಾಲು ಸ್ವೀಕರಿಸಲು ಮುಖ್ಯ ಮಂತ್ರಿಗಳ ಪರವಾಗಿ ಸೂಚನೆಯಂತೆ ಸಚಿವ ಗೋವಿಂದ ಕಾರಜೋಳ ಆಗಮಿಸಿ ಮನವಿಯಲ್ಲಿ ನೀಡಲಾದ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸರಕಾರದ ಪರವಾಗಿ ಆಶ್ವಾಸನೆಯನ್ನು ನೀಡಿರುತ್ತಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸೂಚನೆಯಂತೆ ಉಪ ನಾಯಕ ಯು. ಟಿ. ಖಾದರ್ ಆಗಮಿಸಿ ಗ್ರಾ. ಪಂ. ನೌಕರರ ಬೇಡಿಕೆಗಳ ಕುರಿತು ಅಧಿವೇಶನದಲ್ಲಿ ಚರ್ಚೆಗೆ ಹಾಕಿ ಈಡೇರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಆಶ್ವಾಸನೆಯನ್ನು ನೀಡಿರುತ್ತಾರೆ. ಈ ಸಂದರ್ಭ ಸರಕಾರ ಮತ್ತು ವಿರೋದ ಪಕ್ಷದಿಂದ ನೀಡಿರುವ ಕಾರಣ ಹೋರಾಟವನ್ನು ತಾತ್ಕಾಲಿಕವಾಗಿ ಕೈ ಬಿಡಲಾಯಿತು ಮತ್ತು ಒಂದು ವೇಳೆ ಸರಕಾರದಿಂದ ಗ್ರಾಮ ಪಂಚಾಯತ್ ನೌಕರರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದನೆ ಸಿಗದೇ ಇದ್ದರೆ, ಬೆಂಗಳೂರಿನಲ್ಲಿ ರಾಜ್ಯದ 6000 ಕ್ಕೂ ಅಧಿಕ ಗ್ರಾಮ ಪಂಚಾಯತಿಗಳ ಎಲ್ಲಾ 65000 ಕ್ಕೂ ಅಧಿಕ ಗ್ರಾಮ ಪಂಚಾಯತ್ ನೌಕರರನ್ನು ಸೇರಿಸಿ ಹೋರಾಟವನ್ನು ಕೈಗೊಳ್ಳುವುದಾಗಿ ರಾಜ್ಯಾಧ್ಯಕ್ಷರಾದ ಡಾ.ದೇವಿ ಪ್ರಸಾದ್ ಬೊಳ್ಮ ರವರು ಘೋಷಣೆ ಮಾಡಿದರು.

ಹೋರಾಟದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಆರ್ ಕುಲಾಲ್, ರಾಜ್ಯದ ವಿವಿಧ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯದ ವಿವಿಧ ತಾಲೂಕು ಸಮಿತಿಯ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯದ ವಿವಿಧ ಜಿಲ್ಲಾ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯದ ವಿವಿಧ ತಾಲೂಕು ಹೋರಾಟ ಸಮಿತಿಯ ಸಮಿತಿಯ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ರಾಜ್ಯದ ಮೂಲೆ ಮೂಲೆಯಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಗ್ರಾಮ ಪಂಚಾಯತ್ ನೌಕರರು ಉಪಸ್ಥಿತರಿದ್ದರು.

ಗ್ರಾ. ಪಂ. ನೌಕರರ ಪ್ರಮುಖ ಬೇಡಿಕೆಗಳು
ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಲರ್ಕ್/ಕ್ಲಕ್ ಕಮ್ ಡಿಇಓ, ಬಿಲ್ಲ್ ಕಲೇಕ್ಟರ್ ಹಾಗೂ ಡಾಟ ಎಂಟ್ರೀ ಅಪರೇಟರ್ ಗಳಿಗೆ ಸಿ ದರ್ಜೆಗೆ ಮೇಲ್ದರ್ಜೆಗೇರಿಸಬೇಕು ಮತ್ತು ಅಟೆಂಡರ್, ಕ್ಲೀನರ್ಸ್, ವಾಟರ್ ಮ್ಯಾನ್/ಪಂಪು ಚಾಲಕ ಇತ್ಯಾದಿ ವೃಂದಗಳನ್ನು ಡಿ ದರ್ಜೆಗೆ ಮೇಲ್ದರ್ಜೆಗೇರಿಸುವ ಮೂಲಕ ನಗರ ಮತ್ತು ಪಟ್ಟಣ ಪಂಚಾಯತ್ ನಲ್ಲಿ ಇರುವಂತೆ ಪಂಚಾಯತ್ ನೌಕರರಿಗೆ ಕನಿಷ್ಠ ವೇತನ ಬದಲು ವೇತನ ಶ್ರೇಣಿ ನಿಗಧಿಪಡಿಸಬೇಕು, ಜೊತೆಗೆ ನೌಕರರು ಮತ್ತು ನೌಕರರ ಅವಲಂಬಿತರಿಗೆ ಸರಕಾರದಿಂದ ಆರೋಗ್ಯ ಭದ್ರತೆಯೊಂದಿಗೆ ಪಂಚಾಯತ್ ನೌಕರರ ಮುಂದಿನ ನಿವೃತ್ತಿ ಜೀವನಕ್ಕೆ ಆರ್ಥಿಕ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಬೇಕು.
ಗ್ರಾಮ ಪಂಚಾಯತ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ವಾಟರ್ ಮ್ಯಾನ್, ಶುಚಿತ್ವ ನೌಕರ, ಅಟೆಂಡರ್, ಬಿಲ್ಲ್ ಕಲೇಕ್ಟರ್ ಮತ್ತು ಕ್ಲರ್ಕ್ ಕಮ್ ಡಾಟ ಎಂಟ್ರಿ ಅಪರೇಟರ್ ವೃಂದದ ಎಲ್ಲಾ ನೌಕರರಿಗೆ ಅವರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಪರಿಗಣಿಸಿದೇ ಹಾಗೂ ಪಂಚಾಯತಿಗಳಲ್ಲಿ ಹುದ್ದೆಗಳ ಗರಿಷ್ಠ ಮೀತಿಯನ್ನು ಮತ್ತು ಯಾವುದೇ ಕಾಲಮಿತಿಯನ್ನು ನಿಗದಿಪಡಿಸಿದೆ ರಾಜ್ಯದಲ್ಲಿರುವ ಎಲ್ಲಾ ನೌಕರರಿಗೂ ಜಿ. ಪಂ. ಯಿಂದ ಕಡ್ಡಾಯವಾಗಿ ಅನುಮೋದನೆ ನೀಡಬೇಕು. ಮತ್ತು ಗ್ರಾಮ ಪಂಚಾಯತ್ ಡಾಟ ಎಂಟ್ರಿ ಅಪರೇಟರ್ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳದೆ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ರಾಜ್ಯದ ಎಲ್ಲಾ ಡಾಟ ಎಂಟ್ರೀ ಅಪರೇಟರ್ ಗಳಿಗೆ ಕಡ್ಡಾಯವಾಗಿ ಜಿಲ್ಲಾ ಪಂಚಾಯತ್ ಅನುಮೋದನೆ ನೀಡಿ ಸೇವಾ ಭದ್ರತೆ ಒದಗಿಸಬೇಕು.
ಜಿ. ಪಂ. ಅನುಮೋದನೆಯಾಗಲಿ ಅಥವಾ ಆಗದೇ ಇರಲಿ ಪಂಚಾಯತ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಗ್ರಾಮ ಪಂಚಾಯತ್ ನೌಕರರಿಗೆ ನಿವೃತ್ತಿ ಉಪಧನ ಮಂಜೂರು ಮಾಡಬೇಕು, ಸದ್ರಿ ನಿವೃತ್ತಿ ಉಪಧನ ಪಾವತಿಸಲು ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಸರಕಾರವೇ ಒಂದು ಶಾಶ್ವತ ನಿಧಿಯನ್ನು ಕಾಯ್ದಿರಿಸಿ ಪಂಚಾಯತ್ ನೌಕರರ ನಿವೃತ್ತಿ ಆದ ಒಂದು ತಿಂಗಳ ಒಳಗಾಗಿ ಗೌರವಯುತವಾಗಿ ಅವರಿಗೆ ಸಂದಾಯವಾಗಬೇಕಾದ ನಿವೃತ್ತಿ ಉಪಧನವನ್ನು ಪಾವತಿ ಮಾಡಬೇಕು.