ರಾಮಕುಂಜ: ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ವಿಭಾಗದಲ್ಲಿ ಗಣರಾಜ್ಯೋತ್ಸವು ನಡೆಯಿತು.
ಪ್ರೌಢಶಾಲೆಯ ಹಿರಿಯ ಸಂಸ್ಕೃತ ಅಧ್ಯಾಪಕರಾದ ಜನಾರ್ದನ ಕೆ ಜಿ ಇವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಕೆ ಇವ್ರು ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950 ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಮುಖ್ಯ ಗಣರಾಜ್ಯೋತ್ಸವವನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಾಜ್‌ಪಥದಲ್ಲಿ ಭಾರತದ ರಾಷ್ಟ್ರಪತಿಗಳ ಮುಂದೆ ನಡೆಸಲಾಗುತ್ತದೆ. ವಿದ್ಯಾರ್ಥಿಗಳೆಲ್ಲರೂ ಕೂಡ ಈ ಗಣರಾಜ್ಯೋತ್ಸವದ ಮಹತ್ವವನ್ನ ತಿಳಿದುಕೊಂಡು ಸಂವಿಧಾನಕ್ಕೆ ಬದ್ಧವಾಗಿ ನಡೆಯುವಂತಹ ಸಂಕಲ್ಪವನ್ನು ಈ ಸಂದರ್ಭದಲ್ಲಿ ಮಾಡಬೇಕು ಎಂದು ಸಂದೇಶವನ್ನು ನೀಡಿದರು.
ಈ ಸಮಾರಂಭದಲ್ಲಿ ಕಾಲೇಜಿನ ಅಧ್ಯಾಪಕ ಅಧ್ಯಾಪಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಭರತ್ ಗೌಡ ಮತ್ತು ಶ್ರೀಮತಿ ಪ್ರಫುಲ್ಲ ಇವರು ಕಾರ್ಯಕ್ರಮ ನಿರ್ವಹಣೆ ಮಾಡಿದರು.