ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಯಕ್ಷಗಾನ ತರಬೇತಿ ಕೇಂದ್ರ ಕೊಕ್ಕಡ ಹಾಗೂ ಶಬರಾಯ ಪ್ರತಿಷ್ಠಾನ ಕೊಕ್ಕಡ ಇದರ ಸಹಯೋಗದಲ್ಲಿ ಯಕ್ಷಗಾನ ಕೇಂದ್ರದ ವಾರ್ಷಿಕೋತ್ಸವ 2023 ಮತ್ತು ತರಬೇತಿ ಕೇಂದ್ರದ ಶಿಷ್ಯ ವೃಂದದವರಿಂದ ಶ್ರೀದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟವು ಕೊಕ್ಕಡದ ಹುರುಳಿ ಮಜಲು ವಠಾರದಲ್ಲಿ ಜನವರಿ 29ರಂದು ಸಂಜೆ ನಡೆಯಲಿದೆ.
ಸಂಜೆ 4 ಗಂಟೆಗೆ ಆರಂಭಗೊಳ್ಳಲಿರುವ ಸಭಾ ಕಾರ್ಯಕ್ರಮವನ್ನು ಸೌತಡ್ಕ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಯೋಗೀಶ್ ಆಲಂಬಿಲ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯೆ ಆರತಿ ಭಟ್ ಆಗಮಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಮಂಗಳೂರಿನ ಶ್ರೀನಿವಾಸ ಔಷಧಾಲಯ ಮತ್ತು ವಿಶ್ವವಿದ್ಯಾಲಯದ ಪ್ರಾಂಶುಪಾಲ ಹಾಗೂ ನಿರ್ದೇಶಕ ಡಾ.ರಾಮಕೃಷ್ಣ ಶಬರಾಯ ವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ. ಯಕ್ಷಗಾನ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತರಬೇತಿ ಕೇಂದ್ರದ ಗುರುಗಳಾದ ವಿಠಲ ಹೆಬ್ಬಾರ್, ಶಬರಾಯ ಪ್ರತಿಷ್ಠಾನದ ಪದಾಧಿಕಾರಿಗಳು, ಯಕ್ಷ ತರಬೇತಿ ಕೇಂದ್ರದ ಪೋಷಕರು ವಿದ್ಯಾರ್ಥಿಗಳು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.