ನೆಲ್ಯಾಡಿ: ಈ ಭಾಗದ ಜನರ ಬಹುದಿನದ ಬೇಡಿಕೆಯಂತೆ ಫೆಬ್ರವರಿ 15ರಂದು ನಡೆದ ನೆಲ್ಯಾಡಿ ಗ್ರಾಮ ಪಂಚಾಯತ್ ನ ಮಹಾಸಭೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಮೀನು ಮಂಜೂರು ನ ಮೂಲ ದಾಖಲೆಗಳ ಹಸ್ತಾಂತರ ಮಾಡಲಾಯಿತು.
ನೆಲ್ಯಾಡಿ ಗ್ರಾಮ ಪಂಚಾಯತ್ ನ ಬಳಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ 10 ಸೆಂಟ್ಸ್ ಜಾಗದ ಮೂಲ ದಾಖಲೆ ಪತ್ರವನ್ನು ಗ್ರಾಮ ಪಂಚಾಯತ್ ಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಸಭೆಯ ನೋಡಲ್ ಅಧಿಕಾರಿಗಳ ಸಮ್ಮುಖದಲ್ಲಿ ಪುತ್ತೂರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೃಷ್ಣ ಇವರಿಗೆ ಹತ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಕೆ.ಪಿ ಆನಂದ ಪಡುಬೆಟ್ಟು ಉಪಸ್ಥಿತರಿದ್ದರು.