ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಧ್ಯೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಬೆಂಗಳೂರಿನಿಂದ ಮುರುಡೇಶ್ವರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಫೆಬ್ರವರಿ 16ರ ಮುಂಜಾನೆ 3 ಗಂಟೆ ವೇಳೆ ಪಲ್ಟಿ ಹೊಡೆದ ಘಟನೆ ನಡೆದಿದೆ.
ಘಟನೆಯಲ್ಲಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು, ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಗಂಭೀರ ಗಾಯಗೊಂಡ 5 ಜನರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹಾಗೂ 5 ಜನರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ನೆಲ್ಯಾಡಿಯ ಖಾಸಗಿ ಆಂಬುಲೆನ್ಸ್ ಗಳಲ್ಲಿ ಕರೆದೊಯ್ಯಲಾಗಿದೆ.
ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಹೆಡ್ಕಾನ್ಸ್ಟೇಬಲ್ ಕುಶಾಲಪ್ಪ, ಬಾಲಕೃಷ್ಣ ಮೊದಲಾದವರು ಭೇಟಿ ನೀಡಿ ಸೂಕ್ತ ವ್ಯವಸ್ಥೆಯನ್ನು ಕೈಗೊಂಡರು.