ರತ್ಕಲ್: ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರೊಂದು ನಿಯಂತ್ರಣ ತಪ್ಪಿ ಹೋಟೆಲ್ ಮುಂಭಾಗದ ಹೋರ್ಡಿಂಗ್, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರ ಜಂಕ್ಷನ್ ಬಳಿ ಮಾ.4ರ ಬೆಳಗ್ಗೆ ನಡೆದಿದೆ.
ಆಸ್ಪತ್ರೆಯೊಂದರ ವೈದ್ಯ ಹಾಗೂ ಮತ್ತೊಬ್ಬರು ಆ ಕಾರಿನಲ್ಲಿದ್ದರು. ಅಪಘಾತದ ಪರಿಣಾಮ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿರುದ್ಧ ದಿಕ್ಕಿನಿಂದ ಸುಭಾಷಿತನಗರ ಕಡೆಗೆ ಹೋಗಲು ಕಾರು ಚಾಲಕ ಏಕಾಏಕಿ ಹೆದ್ದಾರಿಗೆ ನುಗ್ಗಿದ್ದು, ಈ ವೇಳೆ ಉಡುಪಿ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕ ಬಲಬದಿಗೆ ತಿರುಗಿಸಿದ್ದರಿಂದ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪರಾಗಿದ್ದಾರೆ. ಇಲ್ಲದಿದ್ದರೆ ಭೀಕರ ಅಪಘಾತ ಸಂಭವಿಸುತ್ತಿತ್ತು ಎನ್ನಲಾಗುತ್ತದೆ.
ಸ್ಥಳಕ್ಕೆ ಬೈಕಂಪಾಡಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.