ಗುಂಡ್ಯ: ಟೆಂಪೋ ಟ್ರಾವೆಲರ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ

ನೇಸರ ಡಿ.31: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಎಂಬಲ್ಲಿ ಶುಕ್ರವಾರ ಸಂಜೆ ಟೆಂಪೋ ಟ್ರಾವೆಲರ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಕುಕ್ಕೇ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ತಮಿಳುನಾಡು ಮೂಲದವರಿದ್ದ ಕಾರು ನಡುವೆ ಗುಂಡ್ಯ ಸಮೀಪದ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಹಾಗೂ ಟ್ರಾವೆಲ್ಲರ್ ನಲ್ಲಿದ್ದ ಒಟ್ಟು ಐವರು ಗಂಭೀರ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ 108 ಅಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕಳುಹಿಸಲಾಯಿತು.

Leave a Reply

error: Content is protected !!