ಪಟ್ಟೂರು:ಅಪ್ರಾಪ್ತ ವಯಸ್ಸಿನ ಯುವತಿಯೊಂದಿಗೆ ಲೈಂಗಿಕ ದೌರ್ಜನ್ಯ; ಆರೋಪಿ ಪತ್ತೆಗಾಗಿ ಪೊಲೀಸರ ಶೋಧ ಕಾರ್ಯ

ಪಟ್ಟೂರು: ಅಪ್ರಾಪ್ತ ವಯಸ್ಸಿನ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ವ್ಯಕ್ತಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಪ್ರಕರಣದ ಆರೋಪಿ ಕಡಬ ತಾಲೂಕಿನ ಬಲ್ಯ ಸಮೀಪದ ಹೊಸಮಠ ನಿವಾಸಿ ಸುನಿಲ್ ದೇವಾಡಿಗನ ಪತ್ತೆಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಅಪ್ರಾಪ್ತ ವಯಸ್ಸಿನ ಯುವತಿಗೆ ಆರು ತಿಂಗಳ ಹಿಂದೆ ತನ್ನ ಮನೆ ಸಮೀಪ ಗಾರೆ ಕೆಲಸ ಮಾಡಲು ಬಂದಿದ್ದ ಯುವಕನ ಪರಿಚಯವಾಗಿರುತ್ತದೆ. ಬಳಿಕ ಆತನ ಜೊತೆ ಸಂಪರ್ಕದಲ್ಲಿದ್ದಳು ಎನ್ನಲಾಗುತ್ತಿದೆ.
ಮಾರ್ಚ್ 17ರಂದು ಯುವತಿಯು ಕಾಣೆಯಾದ ಬಗ್ಗೆ ಆಕೆಯ ತಂದೆ ಧರ್ಮಸ್ಥಳ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸುತ್ತಾರೆ. ಪ್ರಕರಣದ ಬೆನ್ನತ್ತಿದ ಧರ್ಮಸ್ಥಳ ಪೊಲೀಸರು ನಿಟ್ಟೆ ಸಮೀಪ ಆಕೆಯನ್ನು ಪತ್ತೆ ಹಚ್ಚುತ್ತಾರೆ. ಬಳಿಕ ಆಕೆಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಿದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಯುವತಿಯನ್ನು ವಿಚಾರಿಸಿದಾಗ ಆಕೆ ಅಸ್ಪಷ್ಟ ಮಾಹಿತಿಯನ್ನು ನೀಡುತ್ತಿದ್ದು, ಆರೋಪಿಯನ್ನು ಪತ್ತೆ ಹಚ್ಚಿದ ಮೇಲೆಯೇ ಸಂಪೂರ್ಣ ವಿವರ ದೊರೆಯಬೇಕಾಗಿದೆ.

Leave a Reply

error: Content is protected !!