ಮಂಗಳೂರು: ಕೆಎಸ್ಸಾರ್ಟಿಸಿ ಯಿಂದ ಕರಾವಳಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆಗೆ ಕೆಎಸ್ಸಾರ್ಟಿಸಿ ನಿರ್ಧಾರ, 6 ತಿಂಗಳೊಳಗೆ ಸುಮಾರು 90 ಎಸಿ ಮತ್ತು ನಾನ್ ಎಸಿ ಎಲೆಕ್ಟ್ರಿಕ್ ಬಸ್‌ಗಳು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಓಡಾಟ ನಡೆಸಲಿವೆ.
ಡಿಪೋಗಳಿಂದ ಬಸ್‌ಗಳಿಗೆ ಬೇಡಿಕೆ ಇದ್ದರೂ ನಿಗಮದಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಕೊರತೆ ಇದೆ. ಈಗಾಗಲೇ ಕೆಲವು ಎಲೆಕ್ಟ್ರಿಕ್ ಬಸ್‌ಗಳು ಕೆಎಸ್ಸಾರ್ಟಿಸಿಗೆ ಬಂದಿದ್ದರೂ ಮಂಗಳೂರು ಮತ್ತು ಪುತ್ತೂರು ವಿಭಾಗಕ್ಕೆ ಬಂದಿಲ್ಲ. ಎರಡನೇ ಹಂತದಲ್ಲಿ ಇಲ್ಲಿಗೂ ಒದಗಿಸಲು ನಿರ್ಧರಿಸಲಾಗಿದೆ.
ಒಂದು ಬಾರಿ ಬಸ್ಸಿಗೆ ಚಾರ್ಜ್ ಮಾಡಿದರೆ ಸುಮಾರು 250 ಕಿ.ಮೀ. ಸಂಚರಿಸುತ್ತದೆ. ಮಂಗಳೂರಿನ ಕುಂಟಿಕಾನದಲ್ಲಿರುವ ಮೂರನೇ ಡಿಪೋದಲ್ಲಿ ಮತ್ತು ಧರ್ಮಸ್ಥಳ ಡಿಪೋದಲ್ಲಿ ಚಾರ್ಜಿಂಗ್ ಸ್ಟೇಷನ್ ನಿರ್ಮಾಣವಾಗಲಿದೆ.