ಬೆಳ್ತಂಗಡಿ: ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು, ಗುರುವಾರ ಅಧಿಕಾರಿಗಳು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ.
ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿರುವ ಇನೋವಾ ಕಾರು ಹಾಗೂ ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಎಸ್.ಎಸ್.ಟಿ. ಅಧಿಕಾರಿ ಜಯಕೀರ್ತಿ ಹೆಚ್.ಬಿ., ಸುಖೇಶ್ ಜಿ, ಧರ್ಮಸ್ಥಳ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್, ಸುನಿಲ್ ಹಾಗೂ ಸಿ.ಆರ್.ಪಿ.ಎಫ್. ಪಡೆ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಿಸಿದರು.