ಮಂಗಳೂರು: ಮಂಗಳೂರಿನ ಕದ್ರಿಯಲ್ಲಿರುವ ಸೈನಿಕ ಸ್ಮಾರಕದಲ್ಲಿ ನಗರದ ಪ್ರಮುಖರು ಸೇರಿ ರಾಷ್ಟ್ರಸೇವೆಗಾಗಿ ಬಲಿದಾನ ಗೈದು ಹುತಾತ್ಮರಾದ ರಾಷ್ಟ್ರೀಯ ರೈಫಲ್ಸ್‌ನ ಸೈನಿಕರಾದ ಹವಾಲ್ದಾರ್ ಮನ್‌ದೀಪ್ ಸಿಂಗ್, ಲ್ಯಾನ್ಸ್ ನಾಯಕ್ ಕುಲವಂತ್ ಸಿಂಗ್, ಲ್ಯಾನ್ಸ್ ನಾಯಕ್ ದೇಬಶೀಷ್, ಸಿಪಾಯಿ ಸೇವಕ್ ಸಿಂಗ್ ಮತ್ತು ಸಿಪಾಯಿ ಹರ್ ಕಿಶನ್ ಸಿಂಗ್ ರವರ ಬಲಿದಾನವನ್ನು ಸ್ಮರಿಸಿ,ಪುಷ್ಪಾಂಜಲಿ ಮತ್ತು ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು.
ಸೇನೆಯ ರಾಷ್ಟ್ರೀಯ ರೈಫಲ್ಸ್ ತುಕಡಿಗೆ ಸೇರಿದ ಜಮ್ಮುವಿನ ಪೂಂಚ್-ರಜೌರಿ ವಿಭಾಗದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯದಲ್ಲಿ ತೊಡಗಿದ್ದ ಸೇನಾ ವಾಹನವೊಂದರ ಮೇಲೆ ಭಯೋತ್ಪಾದಕರು ಗ್ರೆನೇಡ್ ಹಾಗೂ ಅತ್ಯಾಧುನಿಕ ವಿದೇಶಿ ಶಸ್ತ್ರಾಸ್ತ್ರಗಳ ಮೂಲಕ ನಡೆಸಿದ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದು, ಓರ್ವ ಸೈನಿಕ ತೀವ್ರ ಗಾಯಗೊಂಡಿರುತ್ತಾನೆ. ಸೇನಾ ವಾಹನ ಹೊತ್ತಿ ಉರಿದು ನಾಶವಾಗಿರುತ್ತದೆ.
ಇಂದು ಸಂಜೆ ಮಂಗಳೂರಿನ ಕದ್ರಿಯಲ್ಲಿರುವ ಸೈನಿಕ ಸ್ಮಾರಕದಲ್ಲಿ ನಗರದ ಪ್ರಮುಖರು ಸೇರಿ ರಾಷ್ಟ್ರಸೇವೆಗಾಗಿ ಬಲಿದಾನ ಗೈದು ಹುತಾತ್ಮರಾದ ರಾಷ್ಟ್ರೀಯ ರೈಫಲ್ಸ್‌ನ ಸೈನಿಕರಾದ ಹವಾಲ್ದಾರ್ ಮನ್‌ದೀಪ್ ಸಿಂಗ್, ಲ್ಯಾನ್ಸ್ ನಾಯಕ್ ಕುಲವಂತ್ ಸಿಂಗ್, ಲ್ಯಾನ್ಸ್ ನಾಯಕ್ ದೇಬಶೀಷ್, ಸಿಪಾಯಿ ಸೇವಕ್ ಸಿಂಗ್ ಮತ್ತು ಸಿಪಾಯಿ ಹರ್ ಕಿಶನ್ ಸಿಂಗ್ ರವರ ಬಲಿದಾನವನ್ನು ಸ್ಮರಿಸಿ, ಪುಷ್ಪಾಂಜಲಿ ಮತ್ತು ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು.