ಸುಳ್ಯ: ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಠರ ದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.