ನೆಲ್ಯಾಡಿ: ದಿ| ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ಶೇರ್ ಮಾಡಿ

ನೇಸರ ಜ.2:ಪುತ್ತೂರು ತಾಲೂಕು ಯುವ ಬಂಟರ ಸಂಘ ಇವರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು. ಪುತ್ತೂರು ತಾಲೂಕು ಸಮಿತಿ, ಬಂಟರ ಸಂಘ ಪುತ್ತೂರು ತಾಲೂಕು ಇವರ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ಸಂಘ ಪುತ್ತೂರು ತಾಲೂಕು, ವಿದ್ಯಾರ್ಥಿ ಬಂಟರ ಸಂಘ ಪುತ್ತೂರು ತಾಲೂಕು ಇವರ ಸಹಕಾರದೊಂದಿಗೆ ವಲಯ ಬಂಟರ ಸಂಘ ನೆಲ್ಯಾಡಿ ಇವರ ಸಹಯೋಗದಲ್ಲಿ ದಿ| ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಜ.2ರಂದು ನೆಲ್ಯಾಡಿ ಗಾಂಧಿ ಮೈದಾನದಲ್ಲಿ ನಡೆಯಿತು.

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಮುಂಡಾಳಗುತ್ತುರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಣ ಸಂಯೋಜಕ ಪದ್ಮನಾಭ ಆಳ್ವ ಕೆ.ಗುತ್ತಿಮಾರು ಬೆಳ್ಳಿಪ್ಪಾಡಿಯವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು ತಾಲೂಕು ಮಹಿಳಾ ಬಂಟರ ಸಂಘ ಅಧ್ಯಕ್ಷೆ ಮೀನಾ ಭಾಸ್ಕರ್ ರೈ ಮಾದೋಡಿ, ಪುತ್ತೂರು ತಾಲೂಕು ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ರಾಕೇಶ್.ರೈ ಕೆಡೆಂಜಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ,ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇದರ ನಿರ್ದೇಶಕ ಚಂದ್ರಹಾಸ ಶೆಟ್ಟಿ.ಎನ್.ರವರು ಮಾತನಾಡಿ ಶುಭಹಾರೈಸಿದರು.

ಬಂಟರ ಯಾನೆ ನಾಡವರ ಇದರ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಯುವ ಬಂಟರ ಸಂಘದ ಅದ್ಯಕ್ಷ ಪ್ರಕಾಶ್.ರೈ ಸಾರಕರೆ, ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ವಿಶೇಷ ಆಹ್ವಾನಿತರಾದ ಸತೀಶ್.ರೈ ಕೊಣಾಲುಗುತ್ತು, ಯುವ ಬಂಟರ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಉಪ್ಪಳಿಗೆ, ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ನಿರ್ದೇಶಕರಾದ ಸದಾಶಿವ.ರೈ ಸೂರಂಬೈಲು, ಸುರೇಶ್ ರೈ ಸೂಡಿಮುಳ್ಳು, ಸುಭಾಶ್‌ಕುಮಾರ್ ಶೆಟ್ಟಿ, ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ಗುಡ್ಡಪ್ಪ ಶೆಟ್ಟಿ ಕಪಿಲಾ, ಸಹಸಂಚಾಲಕ ಜಯಾನಂದ ಬಂಟ್ರಿಯಾಲ್ ನೆಲ್ಯಾಡಿ, ಪ್ರಧಾನ ಕಾರ್ಯದರ್ಶಿ ವಾಣಿಸುಂದರ ಶೆಟ್ಟಿ, ಸಾಹಿತಿ ನಾರಾಯಣ ರೈ ಅಗ್ರಾಳ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನೆಲ್ಯಾಡಿ ಗಾಂಧಿಮೈದಾನದಲ್ಲಿರುವ ಗಾಂಧಿಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ನೆಲ್ಯಾಡಿ ವಲಯ ಬಂಟರ ಸಂಘದ ನಿತ್ಯಾನಂದ ಶೆಟ್ಟಿ ಮನವಳಿಕೆಗುತ್ತು ಸ್ವಾಗತಿಸಿ,ಗ್ರಾ.ಪಂ.ಸದಸ್ಯ ರವಿಪ್ರಸಾದ್ ಶೆಟ್ಟಿ ವಂದಿಸಿದರು.ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮ

ಪಂದ್ಯಾಟದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನು ಸುಧೀರ್ ಶೆಟ್ಟಿ ನೇಸರ ಕಂಪ ಮೂಡಂಬೈಲುರವರು ತೆಂಗಿನ ಗರಿ ಅರಳಿಸುವ ಮೂಲಕ ಉದ್ಘಾಟಿಸಿದರು.
ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ.ರೈ ಮನವಳಿಕೆಗುತ್ತುರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಂಟರ ಸಂಘದ ಸದಸ್ಯರೂ ಕೇವಲ ಕ್ರಿಕೆಟ್ ಪಂದ್ಯಾಟಕ್ಕೆ ಸೀಮಿತಗೊಳ್ಳದೇ ಸಂಘದ ವತಿಯಿಂದ ನಡೆಯುವ ಪ್ರತಿಯೊಂದು ಚಟುವಟಿಕೆಯಲ್ಲೂ ಸಕ್ರೀಯರಾಗಿ ಭಾಗವಹಿಸಬೇಕು. ಬಂಟರ ಸಂಘದಲ್ಲಿರುವ ನಾಯಕತ್ವ ಗುಣದ ಪರಂಪರೆಯನ್ನು ಮುನ್ನಡೆಸಿಕೊಂಡು ಹೋಗಲು ಯುವ ಸಂಘದ ಸದಸ್ಯರ ಪಾಲ್ಗೊಳ್ಳುವಿಕೆ ಅತೀ ಮುಖ್ಯವಾಗಿದೆ ಎಂದರು. ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರೈ ಮನವಳಿಕೆಗುತ್ತು, ಬಂಟರ ಸಂಘದ ಪುತ್ತೂರು ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿಯವರು ಮಾತನಾಡಿ ಶುಭಹಾರೈಸಿದರು.

ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷ ಸುಬ್ಬಣ್ಣ ರೈ ಖಂಡಿಗ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಮುಂಡಾಳಗುತ್ತು, ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ವಿಶೇಷ ಆಹ್ವಾನಿತರಾದ ತಿಲಕ್ ರೈ ಕುತ್ಯಾಡಿ, ನಾಟಿವೈದ್ಯೆ ಹೇಮಾವತಿ ರೈ ಬಲ್ಯ-ರಾಮನಗರ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ, ಕ್ರೀಡಾ ಸಂಚಾಲಕ ಶಶಿರಾಜ್ ರೈ ಮುಂಡಾಳಗುತ್ತು, ಸುಭಾಷ್ ರೈ ಬಳ್ಳಮಜಲುಗುತ್ತು, ಉಮೇಶ್ ರೈ ಮನವಳಿಕೆಗುತ್ತು, ಪ್ರವೀಣ್ ಭಂಡಾರಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ನಿಯೋಜಿತ ಜೊತೆ ಕಾರ್ಯದರ್ಶಿ ರಂಜಿನಿ ಬಿ.ಶೆಟ್ಟಿ, ರವಿಚಂದ್ರ ರೈ ಕುಂಬ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೆಲ್ಯಾಡಿ ವಲಯ ಬಂಟರ ಸಂಘದ ಸಹಸಂಚಾಲಕ ಜಯಾನಂದ ಬಂಟ್ರಿಯಾಲ್‌ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸುಚಿತ್ರಾ ಜೆ.ಬಂಟ್ರಿಯಾಲ್, ನಮಿತಾ ಶೆಟ್ಟಿ ಪ್ರಾರ್ಥಿಸಿದರು. ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮನವಳಿಕೆಗುತ್ತು ಸ್ವಾಗತಿಸಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಉಪಾಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ ವಂದಿಸಿದರು. ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!