ಉಜಿರೆ: ಎಸ್.ಡಿ.ಎಂ ಕಾಲೇಜಿನ ಮಹಿಳಾ ತಂಡವು ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪ್ರಶಸ್ತಿ ಯನ್ನು ಗೆದ್ದುಕೊಂಡಿದೆ.
ಇದೇ ಏಪ್ರಿಲ್ ತಿಂಗಳ 28, 29 ರಂದು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ಜರಗಿದ ಪಂದ್ಯಾಟದ ಫೈನಲ್ ನಲ್ಲಿ ಆಳ್ವಾಸ್ ಕಾಲೇಜಿನ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.