ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ಸಿಇಟಿ 2023 ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಕೆಇಎ ವೆಬ್ಸೈಟ್ http://kea.kar.nic.inಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.
ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಕೆಇಎ, ಸರ್ಕಾರದ ನಿರ್ದೇಶನದಂತೆ 2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ಸಿಇಟಿ-2023 ಪರೀಕ್ಷೆಯನ್ನು ನಿಗದಿತ ದಿನಾಂಕದಂದು ನಡೆಸಲಾಗುವುದು.
ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಅಥವಾ http://kea.kar.nic.inಗೆ ಭೇಟಿ ನೀಡಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದೆ.
KCET 2023 ಪ್ರವೇಶ ಪತ್ರ ಡೌನ್ಲೋಡ್ ವಿಧಾನ
* ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
* ಓಪನ್ ಆದ ಪೇಜ್ನಲ್ಲಿ KCET 2023 ಹಾಲ್ ಟಿಕೆಟ್ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
* ನಂತರ ನಿಮಗೆ ಮತ್ತೊಂದು ಪೇಜ್ ಓಪನ್ ಆಗುತ್ತದೆ.
*ಓಪನ್ ಆದ ಪೇಜ್ನಲ್ಲಿ ಅಭ್ಯರ್ಥಿಗಳು ನಿಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಟೈಪ್ ಮಾಡಿ ಲಾಗಿನ್ ಆಗಿ.
* ನಂತರ ನಿಮಗೆ ಪರದೆಯ ಮೇಲೆ ನಿಮ್ಮ ಹಾಲ್ ಟಿಕೆಟ್ ಕಾಣಸಿಗುಸುತ್ತದೆ.
* ಅದನ್ನು ಡೌನ್ಲೋಡ್ ಮಾಡಿಕೊಂಡು, ಪ್ರಿಂಟ್ಔಟ್ ತೆಗೆದುಕೊಳ್ಳಿ.
*ಪ್ರವೇಶ ಪತ್ರವನ್ನು ಡೌನ್ಲೊಡ್ ಮಾಡಿಕೊಂಡ ಮೇಲೆ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿರುವ ಮಾರ್ಗದರ್ಶನಗಳನ್ನು / ಕಾರ್ಯವಿಧಾನಗಳನ್ನು ತಪ್ಪದೆ ಅನುಸರಿಸಲು ಸೂಚಿಸಿದೆ.
ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಿಗದಿತ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.