ಬೆಳ್ತಂಗಡಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಜಯ ಗಳಿಸಿ, ಎರಡನೇ ಬಾರಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ.
ಮೇ.10ರಂದು ನಡೆದ ಚುನಾವಣೆಯ ಮತ ಎಣಿಕೆ ಮೇ.13ರಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆಯಲ್ಲಿ ನಡೆದು ಮಧ್ಯಾಹ್ನದ ವೇಳೆಗೆ ಮತ ಎಣಿಕೆ ಮುಕ್ತಾಯಗೊಂಡಿದೆ. ಪ್ರಥಮ ಸುತ್ತಿನಿಂದ ಕೊನೆಯ ಸುತ್ತಿನವರೆಗೂ ಮುನ್ಮಡೆ ಕಾಯ್ದುಕೊಂಡಿದ್ದ ಹರೀಶ್ ಪೂಂಜ ತನ್ನ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರನ್ನು ಸೋಲಿಸಿ ಗೆಲುವನ್ನು ಸಾಧಿಸಿದ್ದಾರೆ.