ಸುರತ್ಕಲ್: ಕ್ರೀಡಾ ಸಾಮಗ್ರಿ ಸಿಗುವ ಬೃಹತ್ ಮಳಿಗೆ ಒಂದರಲ್ಲಿ ಅಗ್ನಿ ಅನಾಹುತ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ.
ಮಧ್ಯಾಹ್ನದ ವೇಳೆ ಬೆಂಕಿ ಕಾಣಿಸಿಕೊಂಡ ತಕ್ಷಣ ಸುತ್ತಮುತ್ತಲಿನ ಅಂಗಡಿ ವ್ಯಾಪಾರಸ್ಥರು ಮಳಿಗೆ ಬಂದ್ ಮಾಡಿ ಹೊರಬಂದರು.
ಅಗ್ನಿಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದರು ತಕ್ಷಣಕ್ಕೆ ಬರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮಳಿಗೆಯ ಮೇಲ್ ಮಾಡಿ ಸುಟ್ಟು ಭಸ್ಮವಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಇದೇ ಸಂದರ್ಭ ಶಾಸಕ ಭರತ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ನೀಡಿದರು.