ನೆಲ್ಯಾಡಿ: ಇಲ್ಲಿನ ಕೌಕ್ರಾಡಿ ಗ್ರಾಮದ ಪಟ್ಲಡ್ಕ ಎಂಬಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ನಡೆದು ಓರ್ವ ಗಾಯಗೊಂಡ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದೆ.
ಉಡುಪಿಯಿಂದ ಧರ್ಮಸ್ಥಳ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ಸಂಚರಿಸುತ್ತಿದ್ದ ಇಕೋ ಗಾಡಿ ಮತ್ತು ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರುಗಳ ಮಧ್ಯೆ ಅಪಘಾತ ನಡೆದಿದೆ.
ಅಪಘಾತದ ರಭಸಕ್ಕೆ ಇಕೋ ಗಾಡಿ ಪಲ್ಟಿ ಹೊಡೆದು ನಜ್ಜುಗುಜ್ಜಾಗಿದೆ. ಇದರಲ್ಲಿದ್ದ ಓರ್ವ ಗಾಯಗೊಂಡು ಆತನನ್ನು ಉಜಿರೆಯ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ನೆಲ್ಯಾಡಿಯ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.