ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್ – ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು.
ಸಭೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುತ್ತೇವೆ. ಅವರು ಅಂತಿಮ ಕ್ರಮ ಕೈಗೊಳ್ಳುತ್ತಾರೆ ಎಂದರು.
ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಸಭೆ ನಡೆದಿದೆ. ಪ್ರತಿ ವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.