ಕಾಂಗ್ರೆಸ್ ಗ್ಯಾರಂಟಿಗಳಲ್ಲೊಂದಾದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ನಿಬಂಧನೆಗಳನ್ನು ರೂಪಿಸಲಾಗಿದೆ. ಕರ್ನಾಟಕದ ಮಹಿಳೆಯರಿಗೆ, ಕರ್ನಾಟಕದೊಳಗೆ ಸಂಚರಿಸುವ ಬಸ್ಸುಗಳಲ್ಲಿ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಲಾಗಿದೆ. ಅನ್ಯ ರಾಜ್ಯಗಳ ಮಹಿಳೆಯರಿಗೆ, ಹೊರರಾಜ್ಯಗಳಿಗೆ ಹೋಗುವ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ.
ರೇಷನ್ ಕಾರ್ಡ್, ಆಧಾರ್, ವೋಟರ್ ಐಡಿ ಸಾಕು
ಮೊದಲಿಗೆ, ಮಹಿಳೆಯರಿಗೆ ಬಸ್ ಗಳಲ್ಲಿ ಪ್ರಯಾಣಿಸಲು ಪ್ರತ್ಯೇಕ ಪಾಸ್ ನೀಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಪ್ರತ್ಯೇಕ ಪಾಸ್ ಗಳ ಬದಲಿಗೆ, ಮಹಿಳೆಯರು ತಮ್ಮ ಭಾವಚಿತ್ರ ಹಾಗೂ ವಿಳಾಸ ದೃಢೀಕರಣಗೊಳಿಸುವ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ತೋರಿಸಿ ಪ್ರಯಾಣಿಸಬಹುದಾಗಿದೆ. ಇವುಗಳಲ್ಲಿ ಯಾವುದಾದರೂ ಒಂದನ್ನು ತೋರಿಸಿ ಪ್ರಯಾಣಿಸಬಹುದಾಗಿದೆ.
ಎಸಿ ಬಸ್ಸುಗಳಲ್ಲಿ, ಡೀಲಕ್ಸ್ ಬಸ್ಸುಗಳಲ್ಲಿ ಉಚಿತವಿಲ್ಲ
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ (ಕೆಎಸ್ಆರ್ ಟಿಸಿ) ಸಾಮಾನ್ಯ ಬಸ್ ಗಳಲ್ಲಿ, ವೈಭವ್, ರಾಜಹಂಸ ಬಸ್ಸುಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿರಲಿದೆ. ಅಂದರೆ, ಕೆಎಸ್ಆರ್ ಟಿಸಿಯ ಹವಾನಿಯಂತ್ರಿತ ಬಸ್ ಗಳಲ್ಲಿ (ಎ.ಸಿ. ಬಸ್ ಗಳಲ್ಲಿ) ಹಾಗೂ ಡಿಲಕ್ಸ್ ಬಸ್ ಗಳಲ್ಲಿ (ಐರಾವತ, ಐರಾವತ ಕ್ಲಬ್ ಕ್ಲಾಸ್, ಸ್ಲೀಪರ್ ಕ್ಲಾಸ್ ಇತ್ಯಾದಿ) ಉಚಿತ ಪ್ರಯಾಣಕ್ಕೆ ಅವಕಾಶ ಇರುವುದಿಲ್ಲ.
ನಗರ ಸಾರಿಗೆಗಳ ವಿಚಾರಕ್ಕೆ ಬರುವುದಾದರೆ, ಅಲ್ಲಿಯೂ ಎಸಿ ಬಸ್ಸುಗಳು, ಡೀಲಕ್ಸ್ ಬಸ್ಸುಗಳಲ್ಲಿ ಮಾತ್ರ ಪ್ರಯಾಣಿಸಲು ಮಹಿಳೆಯರಿಗೆ ಅವಕಾಶವಿದೆ. ಉದಾಹರಣೆಗೆ, ಬೆಂಗಳೂರು ನಗರದಲ್ಲಿ ಬಿಎಂಟಿಸಿ ಸಂಸ್ಥೆ ನಾಗರಿಕರಿಗೆ ಬಸ್ ಸೇವೆ ನೀಡುತ್ತಿದೆ. ಬೆಂಗಳೂರು ನಗರದಲ್ಲಿ ವಾಸವಿರುವ ಮಹಿಳೆಯರು ಬಿಎಂಟಿಸಿಯ ವೋಲ್ವೋ ಬಸ್ ಗಳನ್ನು (ಹವಾ ನಿಯಂತ್ರಿತ) ಹೊರತುಪಡಿಸಿ ಕೇವಲ ಸಾಮಾನ್ಯ ಬಸ್ ಗಳಲ್ಲಿ ಮಾತ್ರ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ರಾಜ್ಯದ ಮಹಿಳೆಯರಿಗೆ ಮಾತ್ರ ಅವಕಾಶ
ಕರ್ನಾಟಕದಲ್ಲಿ ವಾಸವಿರುವ ಮಹಿಳೆಯರಿಗಷ್ಟೇ ಅವಕಾಶ ಎಂಬ ವಿಚಾರವನ್ನೂ ನಿಯಮಾವಳಿಗಳಲ್ಲಿ ಪ್ರಸ್ತಾಪಿಸಲಾಗಿದೆ. ಹೊರರಾಜ್ಯಗಳಿಂದ ಬರುವ ಮಹಿಳೆಯರಿಗೆ ಇಲ್ಲಿನ ಕೆಎಸ್ಆರ್ ಟಿಸಿಯ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿಲ್ಲ. ಹೊರ ರಾಜ್ಯದಿಂದ ಕರ್ನಾಟಕಕ್ಕೆ ಸಂಬಂಧಿಕರ ಮನೆಗೋ ಅಥವಾ ಪ್ರವಾಸಕ್ಕೋ ಬರುವಂಥ ಮಹಿಳೆಯರಿಗೆ ಈ ಸೌಲಭ್ಯ ಅನ್ವಯವಾಗುವುದಿಲ್ಲ. ಇಲ್ಲಿ ಅವರ ಆಧಾರ್ ಕಾರ್ಡ್, ರೇಷನ್ ಕಾರ್ಡ ಅಥವಾ ಮತದಾರರ ಗುರುತಿನ ಚೀಟಿ ಇದ್ದರೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿರುತ್ತದೆ.
ಹೊರರಾಜ್ಯಗಳಿಗೆ ಹೋಗುವ ಬಸ್ಸುಗಳಲ್ಲಿ ಉಚಿತವಿಲ್ಲ!
ಕೆಎಸ್ಆರ್ ಟಿಸಿಯ ಸಾಮಾನ್ಯ ಬಸ್ ಗಳಲ್ಲಿ ಪ್ರವೇಶವಿದೆ ಎಂದ ಮಾತ್ರಕ್ಕೆ ಆ ಬಸ್ ಗಳಲ್ಲಿ ಹೊರರಾಜ್ಯಗಳಿಗೆ ಪ್ರವೇಶ ಮಾಡಲು ಅವಕಾಶವಿದೆಯೇ ಎಂಬ ಪ್ರಶ್ನೆಗೂ ಸರ್ಕಾರ ಉತ್ತರ ಕೊಟ್ಟಿದೆ. ಅಂದರೆ, ಕರ್ನಾಟಕದ ಗಡಿಯೊಳಗೆ ಮಾತ್ರ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಅನ್ಯ ರಾಜ್ಯಗಳ ಊರುಗಳಿಗೆ ಹೋಗುವ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವು ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ನಾಲ್ಕೂ ನಿಗಮಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ
ಎಲ್ಲಾ ನಾಲ್ಕೂ ನಿಗಮಗಳ ಬಸ್ ಗಳಲ್ಲೂ ಉಚಿತ ಪ್ರಯಾಣದ ಅವಕಾಶ ಇರುತ್ತದೆ ಎಂದು ಸರ್ಕಾರ ಹೇಳಿದೆ. ಕೆಎಸ್ ಆರ್ ಟಿಸಿಯ ಅಡಿಯಲ್ಲಿ ಕರ್ನಾಟಕದ ನಾಲ್ಕು ಪ್ರಾಂತ್ಯಗಳಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು (ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ ಇತ್ಯಾದಿ) ಅವುಗಳಲ್ಲಿನ ಸಾಮಾನ್ಯ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
Yes it is really good opportunity to all the women who are situated in the Karnataka only so only one request from my side is that ……………………………………………….don’t misuse this opportunity and also use this opportunity in good manner and make successful 🙏👍.
Bangarpet