ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ ಹಾವೇರಿಯಲ್ಲಿ ಬಸ್‌ಗಳು ಫುಲ್ ರಶ್ ಆಗಿದ್ದು, ಬಸ್‌ನ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ.
ಹಾವೇರಿ (ಜೂ.12): ರಾಜ್ಯದಲ್ಲಿ ಕಾಂಗ್ರೆಸ್‌ನ ಮೊದಲ ಗ್ಯಾರಂಟಿಯಾಗಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಉಚಿತವಾಗಿ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್ ಫುಲ್‌ರಶ್ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿ ಬಿದ್ದು ಸಾವನ್ನಪ್ಪಿದ ದುರ್ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ಘಟನೆ ನಡೆದಿದೆ. ಮಧು ಕುಂಬಾರ (14 ವರ್ಷ) ಮೃತ ಶಾಲಾ ಬಾಲಕಿಯಾಗಿದ್ದಾಳೆ. ಬಸ್‌ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಬಸ್‌ನಲ್ಲಿ ಜನ ತುಂಬಿದ್ದಾರೆಂದು ಬಸ್ ಬಾಗಿಲ ಬಳಿ ವಿದ್ಯಾರ್ಥಿನಿ ನಿಂತಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ವಿದ್ಯಾರ್ಥಿನಿ ಮೇಲೆ ಹೆಚ್ಚಿನ ಜನರು ಭಾರ ಹಾಕಿದ್ದರಿಂದ ಬಾಲಕಿ ಆಯತಪ್ಪಿ ನೆಲಕ್ಕೆ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಬಸ್ ಕೂಡ ಸ್ವಲ್ಪ ವೇಗವಾಗಿದ್ದರಿಂದ ನೆಲಕ್ಕೆ ಬಿದ್ದ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಗೆ ಹೊರಟಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.
ಲಕಿ ಹಾನಗಲ್ ತಾಲೂಕಿನ ವಾಸನ ಗ್ರಾಮದಿಂದ ಕುಸನೂರು ಗ್ರಾಮಕ್ಕೆ ಪ್ರೌಢಶಾಲೆಗೆ ಆಗಮಿಸುತ್ತಿದ್ದಳು. ಬಸ್ ತುಂಬಾ ರಶ್ ಇರೋ ಕಾರಣಕ್ಕಾಗಿ ಬಾಗಿಲ ಬಳಿಯೇ ನಿಂತುಕೊಂಡು ಚಾಲನೆ ಮಾಡುತ್ತಿದ್ದಳು. ಆದರೆ, ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾಳೆ. ಈ ಘಟನೆ ನಡೆಯುತ್ತಿದ್ದಂತೆಯೇ ವಿದ್ಯಾರ್ಥಿನಿಯಲ್ಲಿ ಅದೇ ಬಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಅಷ್ಟರಲ್ಲಿ ವಿದ್ಯಾರ್ಥಿನಿಯ ಪ್ರಾಣಪಕ್ಷಿ ಹಾರಿಹೋಗಿತ್ತು. ಈ ಘಟನೆ ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳ ಬಸ್ ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.