ಪುತ್ತೂರು: ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದಕ್ಕೆ ವಿದ್ಯುತ್ ಗುತ್ತಿಗೆದಾರನೊಬ್ಬ ಬನ್ನೂರು ಮೆಸ್ಕಾಂ ಉಪವಿಭಾಗ ಕಚೇರಿಗೆ ತೆರಳಿ ಮೆಸ್ಕಾಂ ಎಇಇ ಅವರಿಗೆ ಬೆದರಿಕೆ ಒಡ್ಡಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿರುವ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಸನಾ ಇಲೆಕ್ಟ್ರಿಕಲ್ಸ್ ಮಾಲಕ ಮಹಮ್ಮದ್ ನಿಸಾರ್ ಬೆದರಿಕೆ ಒಡ್ಡಿದ ಆರೋಪಿ. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ದೂರು ನೀಡಿದವರು.
ಜೂ.14ರಂದು ಮಧ್ಯಾಹ್ನ 3.00 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ ಕಚೇರಿಗೆ ಆಗಮಿಸಿ ಮುಂಡೂರು ಗ್ರಾಮದ ರಮೇಶ್ ಅವರ ಕೃಷಿ ನೀರಾವರಿ ಪಂಪ್ ಸೆಟ್ ಗೆ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಿದ್ದೇಕೆ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಇಲಾಖೆಯ ನಿಯಮದ ಅನುಸಾರ ಅರ್ಜಿಯನ್ನು ತಿರಸ್ಕಾರ ಮಾಡಲಾಗಿತ್ತು. ಅದ್ಯಾಗೂ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.