ಬಹುನಿರೀಕ್ಷಿತ ಏಷ್ಯನ್ ಗೇಮ್ಸ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಯುವ ತಂಡವನ್ನು ಕೂಟಕ್ಕೆ ಬಿಸಿಸಿಐ ಪ್ರಕಟಿಸಿದ್ದು, ರುತುರಾಜ್ ಗಾಯಕ್ವಾಡ್ ಗೆ ನಾಯಕತ್ವದ ಹೊಣೆ ನೀಡಲಾಗಿದೆ. ಶಿವಂ ದುಬೆ ಅವರು ಮತ್ತೆ ತಂಡಕ್ಕೆ ಮರಳಿದ್ದಾರೆ.
ಈ ಬಾರಿ ಏಷ್ಯನ್ ಗೇಮ್ಸ್ ಗೆ ಕ್ರಿಕೆಟ್ ಸೇರಿಸಲಾಗಿದೆ. ಚೀನಾದ ಹ್ಯಾಂಗ್ಚೂ ನಲ್ಲಿ ಕೂಟ ನಡೆಯಲಿದೆ. ಸೆಪ್ಟೆಂಬರ್ 28ರಿಂದ ಅಕ್ಟೋಬರ್ 8ರವರೆಗೆ ನಡೆಯಲಿದೆ. ಟಿ20 ಮಾದರಿಯಲ್ಲಿ ಈ ಕೂಟ ನಡೆಯಲಿದೆ.
ತಂಡವು ಭಾರತೀಯ ಕ್ರಿಕೆಟ್ ನಲ್ಲಿ ಅದ್ಭುತ ಉದಯೋನ್ಮುಖ ಪ್ರತಿಭೆಗಳ ಮಿಶ್ರಣವನ್ನು ಹೊಂದಿದೆ. ಗಮನಾರ್ಹ ಸೇರ್ಪಡೆಗಳೆಂದರೆ ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾ. ಇತ್ತೀಚಿನ ಐಪಿಎಲ್ ಋತುವಿನಲ್ಲಿ ಇಬ್ಬರೂ ಆಟಗಾರರು ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.
ಅಕ್ಟೋಬರ್ 5ರಿಂದ ವಿಶ್ವಕಪ್ ಆರಂಭವಾಗುವ ಕಾರಣದಿಂದ ವಿಶ್ವಕಪ್ ನಲ್ಲಿ ಆಡುವ ಆಟಗಾರರನ್ನು ಈ ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ. ಟೆಸ್ಟ್ ಪದಾರ್ಪಣೆ ಮಾಡಿರುವ ಯಶಸ್ವಿ ಜೈಸ್ವಾಲ್ ಕೂಡಾ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ತಂಡ
ರುತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿ.ಕೀ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ, ಪ್ರಭಸಿಮ್ರಾನ್ ಸಿಂಗ್ (ವಿ.ಕೀ)
ಸ್ಟ್ಯಾಂಡ್‌ಬೈ ಆಟಗಾರರು: ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಸಾಯಿ ಸುದರ್ಶನ್