ಸದನದಲ್ಲಿ ಪ್ರತಿಭಟನೆ ನಡೆಸುವ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಯಸ್.ಯಡಿಯೂರಪ್ಪ, ಸ್ಪೀಕರ್ ಯು.ಟಿ.ಖಾದರ್ ಅವರು ಭೇಟಿಯಾಗಿ ಅರೋಗ್ಯ ವಿಚಾರಿಸಿದರು.
ಯತ್ನಾಳ್ ಅವರು ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲವು ಬಿಜೆಪಿ ಶಾಸಕರು ಸಹ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ.
ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ ಬೆನ್ನಲ್ಲೇ ವಿಧಾನಸೌಧದಲ್ಲಿ ಹೈಡ್ರಾಮಾ ನಡೆದಿತ್ತು. ಬಿಜೆಪಿ ಶಾಸಕರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಯತ್ನಾಳ್ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಅವರನ್ನು ತತ್ ಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಪಿ ಸಮಸ್ಯೆಯಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದೆ.