ಪಟ್ರಮೆ: ಮೀಸಲು ಅರಣ್ಯದೊಳಗೆ ಬದುಕಿನಿಂದ ಕಡವೆ ಬೇಟೆಯಾಡಿ ಸಾಗಿಸುವ ವೇಳೆ ಪ್ರಕರಣದಲ್ಲಿ ನಾಲ್ವರನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು. ಈ ವೇಳೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಓರ್ವ ಆರೋಪಿ ಪರಾರಿಯಾಗಿರುವ ಘಟನೆ ಆಗಸ್ಟ್ 23ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದಲ್ಲಿ ನಡೆದಿದೆ.
ಉಪ್ಪಿನಂಗಡಿ ಅರಣ್ಯಾಧಿಕಾರಿಗಳು ಇಲಾಖೆಗೆ ಬಂದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದು. ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಸಂಕೇಶ ನಿವಾಸಿ ಕೊಟ್ಯಪ್ಪ ಗೌಡ, ಪುನೀತ್ ಮಣಿಯೇರು, ಎಸ್.ಜೆ.ಸುದೇಶ ಸಂಕೇಶ ಬಂಧಿತ ಆರೋಪಿ. ಲೋಕೇಶ್ ಸಂಕೇಶ ಆರೋಪಿ ಕಾಡಿನಲ್ಲಿ ಪರಾರಿಯಾಗಿದ್ದು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಂಧಿತ ಆರೋಪಿಗಳಿಂದ ಕಡವೆಯ ಮೃತ ದೇಹ ಮತ್ತು ಸಿಂಗಲ್ ಬ್ಯಾರೆಲ್ ಬ್ರೀಚ್ ಲೋಡರ್ ಕೋವಿಯನ್ನು ವಶಕ್ಕೆ ಪಡೆಯಲಾಗಿದೆ.
ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ರವರ ಮಾರ್ಗದರ್ಶನದಲ್ಲಿ ತಕ್ಷಣ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಲೋಕೇಶ್, ಅಶೋಕ್, ರಾವುತಪ್ಪ ಬಿರಾದಾರ್, ಅರಣ್ಯಾಧಿಕಾರಿ ವಿನಯಚಂದ್ರ, ಪ್ರಶಾಂತ್, ವಾಹನ ಚಾಲಕ ಕಿಶೋರ್ ಪಾಲ್ಗೊಂಡಿದ್ದರು.