ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ ಪ್ರೌಢಶಾಲೆ ಪಡುಬೆಟ್ಟು ನೆಲ್ಯಾಡಿ ಇದರ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ಆ.23ರಂದು ನೆಲ್ಯಾಡಿ ಗ್ರಾಮದ ಪಡುಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಮಾತನಾಡಿದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಅವರು, ಕೋವಿಡ್ನಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ರಾಷ್ಟ್ರಮಟ್ಟದಲ್ಲಿ ನಡೆಯುತ್ತಿದ್ದ ಕ್ರೀಡಾಕೂಟ ಸ್ಥಗಿತಗೊಂಡಿತ್ತು. ಈ ವರ್ಷದಿಂದ ಮತ್ತೆ ಪುನರಾರಂಭಗೊಂಡಿವೆ. ಅಕ್ಟೋಬರ್ ತಿಂಗಳಿನಲ್ಲಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ನಿಗದಿಗೊಂಡಿರುವ ವಿವಿಧ ಪಂದ್ಯಾಟ, ಕ್ರೀಡಾಕೂಟದ ದಿನಾಂಕ ಮರುಹೊಂದಾಣಿಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದ್ದು ಈ ಬಗ್ಗೆ ಈಗಾಗಲೇ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದರು.
ಪಂದ್ಯಾಟ ಉದ್ಘಾಟಿಸಿದ ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಯಾಕೂಬ್ ಯು.,ಯಾನೆ ಸಲಾಂ ಬಿಲಾಲ್ ಅವರು ಮಾತನಾಡಿ, ಕ್ರೀಡೆಯಲ್ಲಿ ಸ್ಪರ್ಧೆ ಸಹಜ. ಹೊಂದಾಣಿಕೆಯ ಹೋರಾಟದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ ಎಂದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಟಿ.ಕ್ರೀಡಾಂಗಣ ಉದ್ಘಾಟಿಸಿದರು. ನೆಲ್ಯಾಡಿ ಗ್ರಾ.ಪಂ.ಸದಸ್ಯ ರವಿಪ್ರಸಾದ್ ಶೆಟ್ಟಿ, ಕಡಬ ತಾಲೂಕು ಸಹಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಮ ಓಡ್ಲ, ಕಡಬ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಮಲ್ಕುಮಾರ್ ನೆಲ್ಯಾಡಿ, ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದ ಸಂಚಾಲಕ ರೆ.ಫಾ.ನೊಯಿಸ್ ಕುರಿಯಾಕೋಸ್ರವರು ಸಂದರ್ಭೋಚಿತವಾಗಿ ಮಾತನಾಡಿದರು.
ನೆಲ್ಯಾಡಿ ಗ್ರಾ.ಪಂ.ಸದಸ್ಯರಾದ ಜಯಲಕ್ಷ್ಮೀಪ್ರಸಾದ್, ಪುಷ್ಪಾ ಪಡುಬೆಟ್ಟು, ಪ್ರಕಾಶ್ ಕೆ., ಪುತ್ತೂರು ತಾಲೂಕು ಸಹಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಇರ್ದೆ, ಸಿಆರ್ಪಿ ಪ್ರಕಾಶ್ ಬಾಕಿಲ, ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮ ಗೌಡ, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಸೀತಾರಾಮ ಗೌಡ ಹಿರೇಬಂಡಾಡಿ, ಕಡಬ ತಾಲೂಕು ಸಹಶಿಕ್ಷಕರ ಸಂಘದ ಕಾರ್ಯದರ್ಶಿ ದೇವಿಪ್ರಸಾದ್, ಕಡಬ ತಾಲೂಕು ಸಹಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ್, ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ, ದೈಹಿಕ ಶಿಕ್ಷಣ ಶಿಕ್ಷಕರ ದ.ಕ. ಜಿಲ್ಲಾ ಸಂಘದ ಉಪಾಧ್ಯಕ್ಷ ಮಾಮಚ್ಚನ್, ಪಡುಬೆಟ್ಟು ಶಾಲಾ ಎಸ್ಡಿಎಂಸಿ ಅಧ್ಯಕ್ಷ ಗುಡ್ಡಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಡುಬೆಟ್ಟು ಪ್ರೌಢಶಾಲೆ ಮುಖ್ಯಶಿಕ್ಷಕಿ ಕಮಲ ಸ್ವಾಗತಿಸಿ, ಸಹಶಿಕ್ಷಕ ಜಯಪ್ಪ ವಂದಿಸಿದರು. ಸಹಶಿಕ್ಷಕಿ ಪ್ರಭಾ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಕುಶಾಲಪ್ಪ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ನೆಲ್ಯಾಡಿ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಸಲಾಂ ಬಿಲಾಲ್ ಅವರನ್ನು ಎಸ್ಡಿಎಂಸಿ ವತಿಯಿಂದ ಗೌರವಿಸಲಾಯಿತು.