
ಪುತ್ತೂರು: ವಿದ್ಯಾಭಾರತಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯು ಸೈಂಟ್ ಮೀರಾ ಆಂಗ್ಲ ಮಾಧ್ಯಮ ಶಾಲೆ ಬೆಳಗಾವಿಯಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಕಿಶೋರ ವರ್ಗದ ಬಾಲಕರ ಗುಂಪು ಸ್ಪರ್ಧೆಯಲ್ಲಿ 9ನೇ ತರಗತಿಯ ಪ್ರಣೀತಕೃಷ್ಣ (ಮುರಳೀಧರ.ಕೆ ಮತ್ತು ಶ್ರೀಮತಿ ಪ್ರಿಯದರ್ಶಿನಿ ದಂಪತಿ ಪುತ್ರ) ಭಾಗವಹಿಸಿ, ದ್ವಿತೀಯ ಸ್ಥಾನ ಪಡೆದಿರುತ್ತಾನೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.



