ಖ್ಯಾತ ನಟಿ ಅಪರ್ಣಾ ನಾಯರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಚಿತ್ರರಂಗ ಕಂಬನಿ

ಶೇರ್ ಮಾಡಿ

ಭಾರತೀಯ ಸಿನಿಮಾ ರಂಗದಲ್ಲಿ ಅಸಹಜ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿವೆ. ಅನುಮಾನಾಸ್ಪದ ಸಾವುಗಳಿಗೆ (Death) ಚಿತ್ರರಂಗವೇ ಬೆಚ್ಚಿ ಬಿದ್ದಿದೆ. ಮಲಯಾಳಂ (Malayalam) ಸಿನಿಮಾ ರಂಗದಲ್ಲಿ ಇಂಥದ್ದೊಂದು ಘಟನೆ ಸಂಭವಿಸಿದ್ದು, ಖ್ಯಾತ ನಟಿ ಅಪರ್ಣಾ ನಾಯರ್ (Aparna Nair) ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶಪ ಪತ್ತೆಯಾಗಿದೆ.

ನಿನ್ನೆ ಸಂಜೆ 7.30ರ ಹೊತ್ತಿಗೆ ಅಪರ್ಣಾ ಅವರ ದೇಹ ನೇಣು (Suicide) ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡ ಅವರ ತಾಯಿ ಮತ್ತು ಸಹೋದರಿ ಕೂಡಲೇ ಅಪರ್ಣಾ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟೊತ್ತಿಗೆ ಅಪರ್ಣಾ ಉಸಿರು ಚೆಲ್ಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಿರುವನಂತಪುರಂ ನಿವಾಸದಲ್ಲಿ ಪತಿ, ಇಬ್ಬರು ಮಕ್ಕಳು, ತಾಯಿ ಮತ್ತು ಸಹೋದರಿಯೊಂದಿಗೆ ಅಪರ್ಣಾ ವಾಸಿಸುತ್ತಿದ್ದರು. ಕೇವಲ 31ನೇ ವಯಸ್ಸಿನಲ್ಲೇ ಕುಟುಂಬ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ ಈ ನಟಿ. ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರೀಯರಾಗಿದ್ದ ಅಪರ್ಣಾ ಸಾಕಷ್ಟು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಸಾಕಷ್ಟು ಅವಕಾಶಗಳು ಇದ್ದರೂ ಅಪರ್ಣಾ ಇಂಥದ್ದೊಂದು ನಿರ್ಧಾರ ತೆಗೆದುಕೊಂಡಿದ್ದಕ್ಕೆ ಕಾರಣ ಏನಿರಬಹುದು ಎಂದು ಪತ್ತೆ ಮಾಡುತ್ತಿದ್ದಾರೆ ಪೊಲೀಸರು. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಟಿಯ ಅಗಲಿಕೆಗೆ ಕೇರಳ ಸಿನಿಮಾ ಮತ್ತು ಟಿವಿ ಉದ್ಯಮ ಕಂಬನಿ ಮಿಡಿದಿದೆ.

Leave a Reply

error: Content is protected !!