ಕಡಬ ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಶೇರ್ ಮಾಡಿ

ಕಡಬ: ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಆಡಳಿತ ಮಂಡಳಿಯ ಸಹಯೋಗದೊಂದಿಗೆ ಸಂಭ್ರಮದಿಂದ ಆಚರಿಸಿದರು.

ವಿದ್ಯಾ ಸಂಸ್ಥೆಯ ಸಂಚಾಲಕರಾದ ವಂ.ಪಾವ್ಲ್ ಪ್ರಕಾಶ್ ಡಿ’ಸೋಜರವರು ಶಿಕ್ಷಕರಿಗೆ ಬಹುಮಾನ ಹಾಗೂ ಉಡುಗೊರೆಗಳನ್ನು ವಿತರಿಸಿ ಮಾತನಾಡಿದರು. ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಗುರು ಪರಂಪರೆಗೆ ಹಾಗೂ ಯುವ ಪೀಳಿಗೆಗೆ ಅನುಸರಣೀಯ ಮೌಲ್ಯಗಳಾಗಿ ಮುಂದುವರಿಯಬೇಕೆಂದು ಆಶಯ ವ್ಯಕ್ತಪಡಿಸಿ, ಶಿಕ್ಷಕ ವೃಂದದವರಿಗೆ ಅವರು ಶುಭಾಶಯ ಕೋರಿದರು.
ವೇದಿಕೆ ಸಂಸ್ಥೆಯ ಮುಖ್ಯಸ್ಥರುಗಳಾದ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಕಿರಣ್ ಕುಮಾರ್, ಶ್ರೀಲತಾ, ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಉಪಸ್ಥಿತರಿದ್ದರು. ಶಿಕ್ಷಕ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿನಿ ಚಿನ್ಮಯಿ ಹಾಗೂ ಸ್ವಾಗತ ಭಾಷಣವನ್ನು ವಿದ್ಯಾರ್ಥಿನಿ ಶ್ಲೋಕ ಮಾಡಿದರು.
ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ಗುಂಪು ಆಟಗಳು ಹಾಗೂ ಮೋಜಿನ ಆಟದ ಸ್ಪರ್ಧೆಯನ್ನು ಆಯೋಜಿಸಿದ್ದರು. ಸೈಂಟ್ ಜೋಕಿಮ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಕಾಲೇಜು, ಸೈಂಟ್ ಆನ್ಸ್ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನೃತ್ಯ, ಪ್ರಹಸನ ಮುಂತಾದ ಮನೋರಂಜನೆ ಕಾರ್ಯಕ್ರಮಗಳನ್ನು ಶಿಕ್ಷಕರಿಗಾಗಿ ಪ್ರಸ್ತುತಪಡಿಸಿದರು. ವಿದ್ಯಾರ್ಥಿ ನಾಯಕಿ ಹರ್ಷಿಣಿ ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು

Leave a Reply

error: Content is protected !!