ಕೋರ್ಟ್ ನಲ್ಲಿ ಜಡ್ಜ್ ಎದುರು ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ!; ಸೆ.23ರ ವರೆಗೆ ನ್ಯಾಯಾಂಗ ಬಂಧನ

ಶೇರ್ ಮಾಡಿ

ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಆಕೆಯ ಸಂಗಡಿಗರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬುಧವಾರ ಬೆಂಗಳೂರಿನ 1 ನೇ ಎಪಿಎಂಸಿ ಕೋರ್ಟ್ ಗೆ ಹಾಜರು ಪಡಿಸಿದ್ದು, ಸೆ.23ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಂಚನೆಯಲ್ಲಿ ಭಾಗಿಯಾದ ಆರೋಪಿಗಳಾದ ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್, ಧನ್ ರಾಜ್ ಅವರನ್ನೂ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕೋರ್ಟ್ ನಲ್ಲಿ ಚೈತ್ರಾ, ಜಡ್ಜ್ ಎದುರು ಕಣ್ಣೀರು ಹಾಕಿ,ನನಗೆ ಪೊಲೀಸರು ಕಿರಿಕಿರಿ ಮಾಡಿದ್ದಾರೆ ಎಂದು ಹೇಳಿರುವುದಾಗಿ ವರದಿಯಾಗಿದೆ.

ಐಷಾರಾಮಿ ಜೀವನ
ವಂಚನೆ ಪ್ರಕರಣ ಬೆಳಕಿಗೆ ಬರುವ ಮುನ್ನ ಚೈತ್ರಾ ದುಬಾರಿ ಬೆಲೆಯ ಕಾರು ಖರೀದಿಸಿ ಐಷಾರಾಮಿ ಜೀವನ ನಡೆಸುತ್ತಿದ್ದುದು ಬಯಲಾಗಿದೆ.
ವಿಧಾನಸಭಾ ಚುನಾವಣೆ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

Leave a Reply

error: Content is protected !!