ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆಯಲಿರುವ ಕರಾವಳಿ ಜಾನಪದೀಯ ಕ್ರೀಡೆ ಕಂಬಳ ಉದ್ಘಾಟನೆಗೆ ಮಂಗಳೂರು ಮೂಲದ ನಟಿ ಅನುಷ್ಕಾ ಶೆಟ್ಟಿ ಅವರನ್ನು ಆಹ್ವಾನಿಸಲಾಗಿದೆ. ಈ ಬಾರಿ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಕ್ರೀಡೆ ನಡೆಯಲಿದೆ.
ಇದೇ ನವೆಂಬರ್ 25 ಮತ್ತು 26ರಂದು ಕಂಬಳವನ್ನು ಆಯೋಜನೆ ಮಾಡಿದ್ದು, ದಕ್ಷಿಣದ ತಾರೆ ಅನುಷ್ಕಾ ಶೆಟ್ಟಿ ಅವರಿಗೆ ಆಹ್ವಾನ ನೀಡಲಾಗಿದೆ. ಅವರು ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತ ಸಿನಿಮಾ ರಂಗದಲ್ಲಿ ಅಪಾರ ಅಭಿಮಾನಿಗಳನ್ನೂ ಹೊಂದಿರುವ ಮತ್ತು ಮಂಗಳೂರು ಮೂಲದವರು ಆಗಿರುವ ಕಾರಣದಿಂದಾಗಿ ಅನುಷ್ಕಾ ಅವರನ್ನು ಆಹ್ವಾನಿಸಲಾಗಿದೆ.
ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆಯಾಗಿದ್ದು, ಇದಕ್ಕಾಗಿ ಭಾರೀ ಸಿದ್ಧತೆ ಕೂಡ ಮಾಡಲಾಗುತ್ತಿದೆ. ರಾಜಧಾನಿಗೆ ಬರಲು ಕಂಬಳದ ಕೋಣಗಳು ಕೂಡ ರೆಡಿಯಾಗತ್ತಿವೆ. ಮಂಗಳೂರಿನಿಂದ ಬೆಂಗಳೂರಿಗೆ ಬರಲಿರುವ ಕಂಬಳ ಕೋಣಗಳು, ಇಲ್ಲಿನ ಜನರಿಗೆ ಸಖತ್ ಮನರಂಜನೆ ಕೂಡ ನೀಡಲಿವೆ.