ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಕೋಶ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಇದರ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಭಾರತ್ ರೋವರ್ಸ್ ಮತ್ತು ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘ, ಎ ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದಲ್ಲಿ ಸೆ.15ರಂದು ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು.
ಉದ್ಘಾಟನೆಯನ್ನು ಲಯನ್ ರಾಮಚಂದ್ರ ಪಳಂಗಾಯ ಎಂ.ಜಿ.ಎಫ್. ಅಧ್ಯಕ್ಷರು, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇವರು ವಹಿಸಿದ್ದರು. ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರಾದ ಡಾ.ದಿನೇಶ್ ಕೆ ಶಿಬಿರವನ್ನು ಉದ್ಘಾಟಿಸಿದರು. ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾಕೋಶದ ಸಂಯೋಜಕರಾದ ಶ್ರೀಮತಿ ಲತಾ ಬಿ.ಟಿ , ಶ್ರೀ ಪಿ.ಆರ್ ಗೋಪಾಲಕೃಷ್ಣ ತಾಂತ್ರಿಕ ಅಧಿಕಾರಿ ಎ.ಜೆ ಬ್ಲಡ್ ಬ್ಯಾಂಕ್ ಮಂಗಳೂರು, ಶ್ರೀ ವಿವೇಕಾನಂದ ದೇವರಗದ್ದೆ ಅಧ್ಯಕ್ಷರು, ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರು, ಲೈನ್ಸ್ ಕ್ಲಬ್ ನ ಸ್ಥಾಪಕ ಅಧ್ಯಕ್ಷರಾದ ಲಯನ್ ಪ್ರೊಫೆಸರ್ ರಂಗಯ್ಯ ಶೆಟ್ಟಿಗಾರ್, ಲಯನ್ಸ್ ಕ್ಲಬ್ ನ ಖಜಾಂಜಿ ಚಂದ್ರಶೇಖರ್ ಪಾಣತ್ತಿಲ, ರೇಂಜರ್ಸ್ ಲೀಡರ್ ಶ್ರೀಮತಿ ಪ್ರಮೀಳಾ, ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಸಂಯೋಜಕರಾದ ಸೃಜನ್ ಮುಂಡೋಡಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಶ್ರೀಮತಿ ಆರತಿ ಕೆ ಸ್ವಾಗತಿಸಿದರು. ಲಯನ್ಸ್ ಕ್ಲಬ್ಬಿನ ಕಾರ್ಯದರ್ಶಿಗಳಾದ ಸತೀಶ್ ಕೂಜುಗೋಡು ಧನ್ಯವಾದ ಅರ್ಪಿಸಿದರು. ವಿದ್ಯಾರ್ಥಿನಿ ಕಲ್ಪನಾ ಕಾರ್ಯಕ್ರಮ ನಿರೂಪಿಸಿದರು.
ಒಟ್ಟು 62 ಯುನಿಟ್ ಬ್ಲಡ್ ಅನ್ನು ರಕ್ತದಾನಿಗಳಿಂದ ಸಂಗ್ರಹಿಸಲಾಯಿತು.