ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಾಳ್ತಿಲ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ಈ ಘಟನೆ ಸೆ.20ರಂದು ರಾತ್ರಿ 10 ಗಂಟೆಯ ಬಳಿಕ ನಡೆದಿದ್ದು, ಸ್ಥಳೀಯ ನಿವಾಸಿ ವಿಶ್ವನಾಥ ಎಂಬಾತ ಮನೆಯ ಕೋಣೆಯ ಕಿಟಕಿಯ ಕಿಟಕಿಯ ಪರದೆಯನ್ನು ಸರಿಸಿ ಬಳಿಕ ಕಿಟಕಿ ಮೂಲಕ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ಇಣುಕಿ ನೋಡುತ್ತಿದ್ದು, ನೋಡುತ್ತಿದ್ದು, ಇದನ್ನು ಗಮನಿಸಿ ದೂರುದಾರರು ಜೋರಾಗಿ ಕಿರುಚಿದಾಗ ಅಲ್ಲಿಂದ ಓಡಿ ಹೋಗಿದ್ದಾನೆ ಎಂದು ದೂರಲಾಗಿದೆ.
ದೂರುದಾರರ ತಂದೆ ನಿಧನ ಹೊಂದಿದ್ದು, ತಾಯಿ ಹಾಗೂ ಮೂವರು ಹೆಣ್ಣುಮಕ್ಕಳು ಮನೆಯಲ್ಲಿ ಇದ್ದಾರೆ. ಮನೆಯಲ್ಲಿ ಮಹಿಳೆಯರೇ ಇರುವ ಕಾರಣ ಈತ ರಾತ್ರಿ ವೇಳೆ ಲೈಂಗಿಕ ಕಿರುಕುಳ ನೀಡಲು ಬಂದಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಈತನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪೊಲೀಸರಿಗೆ ಮನವಿ ಮಾಡಿದ್ದಾರೆ.