ಈ ಹಿಂದೆ ಧರ್ಮಸ್ಥಳದಲ್ಲಿ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾಟ್ಮೆರ್ಂಟ್‍ನಿಂದ ಜಿಗಿದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಿಜಯಲಕ್ಷ್ಮಿ(17) ವರ್ಷ ಮೃತ ಯುವತಿ. ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಇಲ್ಲಿನ ಬ್ರೈಡ್ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ಅಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯರು ರಕ್ಷಣೆ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ರು. ಪೋಷಕರಿಗೆ ಫೋನ್ ಮಾಡಿ ತಿಳಿ ಹೇಳಿ ಯುವತಿಯನ್ನು ವಾಪಸ್ ಕಳುಹಿಸಿದ್ರು. ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸ್ ಬಂದು ಅಪಾರ್ಟ್ ಮೆಂಟ್ ನ ಟೆರೇಸ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇತ್ತ ಪುತ್ರಿ ಕಾಣೆಯಾಗಿದ್ದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೈಂಟ್ ಕೂಡ ದಾಖಲಾಗಿತ್ತು. ಸದ್ಯ ಯುವತಿ ಆತ್ಮಹತ್ಯೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.