ಕಡಬ ಸೈಂಟ್ ಆನ್ಸ್ ಶಾಲೆ ಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ

ಶೇರ್ ಮಾಡಿ

ಕಡಬ ಸೈಂಟ್ ಆನ್ಸ್ ಶಾಲೆ ಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಸೈಂಟ್ ಆನ್ಸ್ ಸಂಸ್ಥೆಯ ಪ್ರಾಂಶುಪಾಲರಾದ ವಂದನೆಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಭಾರತದಲ್ಲಿ ಪ್ರತಿವರ್ಷ ಅಕ್ಟೋಬರ್ ಎರಡರಂದು ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಇದು ಮಹಾನ್ ನಾಯಕ ಮತ್ತು ಸ್ವಾತಂತ್ರ ಹೋರಾಟಗಾರ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಸೂಚಿಸುತ್ತದೆ. ಇದರ ಜೊತೆಗೆ ನಮ್ಮ ಭಾರತದ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಆಚರಿಸಲಾಗುತ್ತದೆ. ಗಾಂಧೀಜಿಯವರ ಪ್ರಸಿದ್ಧ ತತ್ವವೆಂದರೆ ಅಹಿಂಸೆ ಅವರು ತಮ್ಮ ಜೀವನದುದ್ದಕ್ಕೂ ಅಭ್ಯಾಸ ಮಾಡಿದರು. ಈ ದಿನದಂದು ನಾವು ಗಾಂಧೀಜಿ ಮತ್ತು ಶಾಸ್ತ್ರಿಯವರ ಆದರ್ಶಗಳಿಗೆ ಗೌರವ ಸಲ್ಲಿಸಿ ನಮ್ಮ ಜೀವನದಲ್ಲಿ ಸತ್ಯ ಮತ್ತು ಅಹಿಂಸೆ ಮಾರ್ಗವನ್ನು ಅನುಸರಿಸಲು ಪ್ರತಿಜ್ಞೆ ಮಾಡೋಣ ಎಂದು ಹೇಳಿದರು.

ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರ ಪುಷ್ಪಾರ್ಚನೆ ಮಾಡಲಾಯಿತು.

ವೇದಿಕೆಯಲ್ಲಿ ಸೈಂಟ್ ಆನ್ಸ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ದಕ್ಷರವರು ಉಪಸ್ಥಿತರಿದ್ದರು. ಈ ದಿನದ ಮಹತ್ವದ ಬಗ್ಗೆ ಸಹಶಿಕ್ಷಕ್ಕೆ ಶ್ರೀಮತಿ ಮೀನಾಕ್ಷಿ ಅವರು ಹೇಳಿದರು.

ಸಹ ಶಿಕ್ಷಕಿ ಝೀನತ್ ಬಾನು ಸ್ವಾಗತಿಸಿ, ಕುಮಾರಿ ಫಿಲೋಮಿನ ವಂದಿಸಿದರು. ಕುಮಾರಿ ಜಯಶ್ರೀ ನಿರೂಪಿಸಿದರು. ಕಾರ್ಯಕ್ರಮದ ಕೊನೆಗೆ ಶಾಲಾ ಪರಿಸರದ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು.

Leave a Reply

error: Content is protected !!