Bigg Boss Kannada 10: ದೊಡ್ಮನೆಗೆ ಬರಲಿರುವ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ

ಶೇರ್ ಮಾಡಿ

ಬಿಗ್ ಬಾಸ್ ಕನ್ನಡ ಸೀಸನ್ 10 ಆಟ ಶುರುವಾಗಲು ನಾಲ್ಕು ದಿನ ಬಾಕಿಯಿದ್ದು, ಈ ಬಾರಿ ದೊಡ್ಮನೆ ಆಟದಲ್ಲಿ ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬುದರ ಮತ್ತೊಂದು ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಹರಿದಾಡುತ್ತಿದೆ. ಅಕ್ಟೋಬರ್ 8ಕ್ಕೆ ಬಿಗ್ ಬಾಸ್ ಗ್ರ್ಯಾಂಡ್ ಓಪ್‌ನಿಂಗ್‌ಗೆ ಸಾಕಷ್ಟು ತಯಾರಿ ನಡೆಯುತ್ತಿದ್ದು, ಈಗ ಮತ್ತೆ ಒಂದಿಷ್ಟು ಹೊಸ ಸ್ಪರ್ಧಿಗಳ ಹೆಸರು ವೈರಲ್ ಆಗುತ್ತಿದೆ.

ದೊಡ್ಮನೆಗೆ ಆಟಕ್ಕೆ ಮೊದಲ ಸ್ಪರ್ಧಿಯಾಗಿ ‘777 ಚಾರ್ಲಿ’ ಎಂಟ್ರಿ ಕೊಡುವ ವಿಚಾರ ಅಧಿಕೃತವಾಗಿ ಹೊರಬಿದ್ದಿದೆ. ನಟ ಸುನೀಲ್ ರಾವ್, ಭವ್ಯಾ ಗೌಡ,ರಘು ಮುಖರ್ಜಿ, ಸಮಾಜ ಸೇವಕಿ ಅಕ್ಕ ಅನು, ಪ್ರಕಾಶ್ ತುಮ್ಮಿನಾಡು, ರಂಜನಿ ರಾಘವನ್, ಹುಲಿ ಕಾರ್ತಿಕ್, ನಮ್ರತಾ ಗೌಡ, ಚಂದ್ರಪ್ರಭ, ಅಗ್ನಿಸಾಕ್ಷಿ ಖ್ಯಾತಿಯ ರಾಜೇಶ್ ಧ್ರುವ, ‘ಕೆಜಿಎಫ್’ ನಟಿ ರೂಪಾ ರಾಯಪ್ಪ, ಮಿಮಿಕ್ರಿ ಗೋಪಿ, ಕ್ರಿಕೆಟರ್ ವಿನಯ್ ಕುಮಾರ್, ಪೋಷಕ ನಟಿ ಸ್ವಾತಿ, ರಕ್ಷಕ್ ಬುಲೆಟ್ ಪ್ರಕಾಶ್, ರ‍್ಯಾಪರ್ ಇಶಾನಿ ಸೇರಿದಂತೆ ಹಲವರು ಬಿಗ್ ಬಾಸ್ ಸ್ಪರ್ಧಿಸುವ ಸ್ಯಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಿಗ್ ಬಾಸ್ ಕನ್ನಡ ಸೀಸನ್ 10ಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಹಲವು ಪ್ರೋಮೋಗಳನ್ನು ರಿಲೀಸ್ ಮಾಡುವ ಮೂಲಕ ವಾಹಿನಿಯು ಪ್ರೇಕ್ಷಕರಲ್ಲಿ ಕುತೂಹಲವನ್ನುಂಟು ಮಾಡುತ್ತಿದೆ. ಈಗಾಗಲೇ ಬಿಗ್ ಬಾಸ್ ಯಾವಾಗಿಂದ ಶುರುವಾಗುತ್ತದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದೆ. ಈಗ ಪ್ರಸಾರದ ವೇಳೆಯನ್ನೂ ಅದು ಹೇಳಿಕೊಂಡಿದೆ.

ಅಕ್ಟೋಬರ್ 8ರಿಂದ ಪ್ರಾರಂಭವಾಗುವ ಬಿಗ್ ಬಾಸ್ ಶೋ, ಮೊದಲ ದಿನ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಮರುದಿನದಿಂದ ಪ್ರತಿ ರಾತ್ರಿ 9.30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ವಾಹಿನಿಯು ರಿಲೀಸ್ ಮಾಡಿದ ಪ್ರೋಮೋದಲ್ಲಿ ತಿಳಿಸಲಾಗಿದೆ. ಇದಕ್ಕಾಗಿಯೇ ವಿಶೇಷ ಪ್ರೋಮೋ ಕೂಡ ಮಾಡಿದೆ.

ಬಿಗ್ ಬಾಸ್‌ಗೆ ಹೋಗುವ ಮುನ್ನವೇ ವಾಹಿನಿಯಾಗಲಿ, ಬಿಗ್ ಬಾಸ್ ಮನೆ ಪ್ರವೇಶ ಮಾಡುವ ಸ್ಪರ್ಧಿಗಳಾಗಲೀ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವ ವಿಚಾರವನ್ನು ರಿವೀಲ್ ಮಾಡೋದಿಲ್ಲ. ಸ್ಪರ್ಧಿಗಳು ಯಾರು ಅನ್ನೋದು ಬಿಗ್ ಬಾಸ್ ಶೋ ಲಾಂಚ್ ಆಗುವ ದಿನವೇ ಗೊತ್ತಾಗುತ್ತದೆ. ಆದರೆ ಈ ಬಾರಿ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಸ್ಪರ್ಧಿ ಯಾರು ಅನ್ನೋದನ್ನು ಇದೀಗ ವಾಹಿನಿ ಹೇಳಿದೆ. ರಕ್ಷಿತ್ ಶೆಟ್ಟಿ ಜೊತೆ ನಟಿಸಿದ ಚಾರ್ಲಿ ಮನೆಗೆ ಎಂಟ್ರಿ ಕೊಡುತ್ತಿದ್ದಾರೆ.

ಸದ್ಯ ವೈರಲ್ ಆಗಿರುವ ಸ್ಪರ್ಧಿಗಳ ಹೆಸರು ಕೇಳಿ ಫ್ಯಾನ್ಸ್ ಖುಷಿ ಪಡ್ತಿದ್ದಾರೆ. ಆದರೆ ಇವರೆಲ್ಲರೂ ದೊಡ್ಮನೆ ಆಟದಲ್ಲಿ ಇರುತ್ತಾರಾ? ಅಕ್ಟೋಬರ್ 8ರವರೆಗೆ ಕಾಯಬೇಕಿದೆ.

Leave a Reply

error: Content is protected !!