ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದೆ. ಮುಸ್ಲಿಂ ಯುವತಿಯ ಜೊತೆ ಸ್ನೇಹ ಬೆಳೆಸಿದ ಆರೋಪದಲ್ಲಿ ಬಿಜೆಪಿ, ಭಜರಂಗದಳದ ಕಾರ್ಯಕರ್ತ ಅಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದ್ದು, ಯುವತಿಯ ಮನೆಯಲ್ಲೇ ಅಜಿತ್ ಸಿಕ್ಕಿಬಿದ್ದಿದ್ದ. ಯುವತಿಯ ಮನೆಯ ಕಬೋರ್ಡ್ನಲ್ಲಿ ಅವಿತು ಕುಳಿತಿದ್ದ ಎಂಬ ವಿಚಾರ ಬಯಲಾಗಿದೆ.
ಅಜಿತ್ ಕಬೋರ್ಡ್ನಲ್ಲಿ ಅವಿತು ಕುಳಿತಿರುವುದು ಎನ್ನಲಾದ ವಿಡಿಯೋ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಯುವತಿಯ ಮನೆಯಲ್ಲಿ ಸಿಕ್ಕಿಬಿದ್ದ ಅಜಿತ್ ಮೇಲೆ ಯುವಕರ ಗುಂಪು ಹಲ್ಲೆ ಮಾಡಿತ್ತು. ಅನ್ಯಕೋಮಿನ ಯುವತಿಯೊಂದಿಗೆ ಸ್ನೇಹ ಮಾಡಿದ್ದಕ್ಕೆ ತನ್ನ ಮೇಲೆ ನಡು ರಸ್ತೆಯಲ್ಲಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿದ್ದ.
ಈ ಮಧ್ಯೆ, ಬಿಜೆಪಿ ಕಾರ್ಯಕರ್ತ ಅಜಿತ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಅಜಿತ್ಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.