ನೇಸರ ಜ.31:ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ 2021-2022 ನೇ ಸಾಲಿನ ಮಾರ್ಚ್ ತಿಂಗಳಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪಬ್ಲಿಕ್ ಪರೀಕ್ಷೆಯ ತಯಾರಿಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಹಾಗೂ ಉತ್ತಮ ಫಲಿತಾಂಶಗಳನ್ನು ಗುರಿಯನ್ನಿಟ್ಟುಕೊಂಡು ವಿದ್ಯಾರ್ಥಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಬೆಥನಿ ಸಮೂಹ ಸಂಸ್ಥೆಗಳ ಸಂಚಾಲಕರಾದ ರೇ.ಫಾದರ್.ಸತ್ಯನ್ ತೋಮಸ್,OIC ಯವರು ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಪೋಷಕರು ಹಾಗೂ ಶಿಕ್ಷಕರು ಸಂಸ್ಥೆಗೆ ಮತ್ತು ವಿದ್ಯಾರ್ಥಿಗಳಿಗೆ ನೆರವಾಗಬೇಕೆಂಬ ಸಲಹೆಯನ್ನು ನೀಡಿದರು.
ಸಂಸ್ಥೆ ಪ್ರಾಂಶುಪಾಲರಾದ ರೇ.ಫಾದರ್.ತೋಮಸ್ ಬಿಜಿಲಿ,OIC ಅವರು ಮಾತನಾಡಿ ವಿದ್ಯಾರ್ಥಿಗಳೆಲ್ಲರೂ ಉನ್ನತ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಪಾಸಾಗಬೇಕು ಅದಕ್ಕಾಗಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಶಿಕ್ಷಕರು ಹಾಗೂ ಪೋಷಕರು ಈ ನಿಟ್ಟಿನಲ್ಲಿ ತುಂಬು ಹೃದಯದ ಸಹಕಾರ ನೀಡಬೇಕೆಂದರು.
ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಜಾರ್ಜ್ ಕೆ.ತೋಮಸ್ ರವರು ವಾರ್ಷಿಕ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿಗಳಿಗಾಗಿ ನಡೆಸುವ ಪರೀಕ್ಷೆಗಳು ಹಾಗೂ ಇತರ ಕಾರ್ಯಕ್ರಮಗಳ ವಿವರವಾದ ಮಾಹಿತಿಯನ್ನು ನೀಡಿದರು.
ಸಂಸ್ಥೆಯ ಉಪಪ್ರಾಂಶುಪಾಲರಾದ ಜೋಸ್.ಜೆ ಅವರು ಪ್ರತಿಯೊಂದು ವಿಷಯವನ್ನು ಸರಿಯಾಗಿ ಅಧ್ಯಯನ ಮಾಡಬೇಕು,ವಿಷಯಗಳೊಂದಿಗೆ ಭಾಷಾ ವಿಷಯಗಳಿಗೂ ಸಮನಾದ ಪ್ರಾಮುಖ್ಯತೆಯನ್ನು ಕೊಟ್ಟು ವಿದ್ಯಾರ್ಥಿಗಳು 6 ವಿಷಯಗಳನ್ನು ಸರಿಯಾಗಿ ತಯಾರಿ ನಡೆಸಬೇಕು.ವಿದ್ಯಾರ್ಥಿಗಳು ಒತ್ತಡಕ್ಕೊಳಗಾಗದೆ ದಿನಕ್ಕೆ ಕನಿಷ್ಠ ಪಕ್ಷ ನಾಲ್ಕು ಗಂಟೆಯಾದರೂ ಕಲಿಯಬೇಕು ಉತ್ತಮ ಅಂಕ ಗಳಿಸಲು ಹಳೆಯ ಪ್ರಶ್ನೆಪತ್ರಿಕೆಗಳ ಅಧ್ಯಯನ ಮಾಡಬೇಕೆಂದು ಹೇಳಿದರು.
ವಿದ್ಯಾರ್ಥಿಗಳ ಆಪ್ತಸಮಾಲೋಚಕಿಯಾದ ಎಂ.ಯು.ರಜಿನಾ ರವರು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆ ಹಾಗೂ ಒತ್ತಡಗಳ ಬಗ್ಗೆ ಮಾತನಾಡಿ ಪೋಷಕರು ವಿದ್ಯಾರ್ಥಿಗಳಿಗೆ ತಮ್ಮ ಸಮಯವನ್ನು ಮೀಸಲಿಡಬೇಕೆಂದು ತಿಳಿಸಿದರು.
ವಿದ್ಯಾರ್ಥಿಗಳ ಪೋಷಕರು ಮುಕ್ತವಾಗಿ ವಿದ್ಯಾರ್ಥಿಗಳ ಪ್ರಗತಿಯ ಬಗ್ಗೆ ಚರ್ಚೆ ಮಾಡಿದರು ಕಾರ್ಯಕ್ರಮದಲ್ಲಿ ಶಿಕ್ಷಕರು,ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದರು.ಶಿಕ್ಷಕಿ ಪೂರ್ಣಿಮಾ ಶೆಣೈ ಸ್ವಾಗತಿಸಿ,ಶಿಕ್ಷಕಿ ಶ್ರೀಮತಿ ಎಲಿಜಬೆತ್ ವಂದಿಸಿದರು,ಶಿಕ್ಷಕಿ ಶ್ರೀಮತಿ ಮಂಜು ಫಿಲಿಪ್ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು